ಬೆಂಗಳೂರು: ಸಿಬ್ಬಂದಿ ಜೊತೆಗಿನ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದ ಬಂದ್ ಆಗಿದ್ದ ಮೆಟ್ರೋ ಸೇವೆ ಆರಂಭವಾಗಿದೆ.
ಎಲ್ಲ ಮೆಟ್ರೋ ನಿಲ್ದಾಣಗಳು ಓಪನ್ ಆಗಿದ್ದು, ಪ್ರತಿಭಟನೆ ಕೈಬಿಟ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ 4 ನಿಮಿಷಕ್ಕೆ ಒಂದರಂತೆ ರೈಲು ಓಡಿಸಲು ನಿರ್ಧರಿಸಲಾಗಿದೆ.
ಸ್ಟಾಪ್ ಆಗಿದ್ದು ಯಾಕೆ?
ಗುರುವಾರ ಮೆಟ್ರೋ ಸಿಬ್ಬಂದಿ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆ ನಡುವೆ ಮಾರಾಮಾರಿ ನಡೆದಿತ್ತು. ಈ ಗಲಾಟೆ ವೇಳೆ ಆರು ಜನ ಬಿಎಂಆರ್‍ಸಿಎಲ್ ಸಿಬ್ಬಂದಿಯನ್ನು ಬಂಧಿಸಲಾಗಿತ್ತು. ಬಿಎಂಆರ್‍ಸಿಎಲ್ ಸಿಬ್ಬಂದಿ ಬಂಧನವನ್ನು ಖಂಡಿಸಿ ಮೆಟ್ರೋ ಸಿಬ್ಬಂದಿ ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ಡಿಪೋದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು. ಮೆಟ್ರೋ ಸಿಬ್ಬಂದಿ ಪ್ರತಿಭಟನೆಯಲ್ಲಿ ತೊಡಗಿದ್ದರಿಂದ ಮೆಟ್ರೋ ಸಂಚಾರ ಸಂಪೂರ್ಣ ನಿಂತು ಹೋಗಿತ್ತು.
ಇದನ್ನು ಓದಿ: ಕೆಲಸಕ್ಕೆ ಲೇಟಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ರು, ಮೆಟ್ರೋ ಸಿಬ್ಬಂದಿ ಮಧ್ಯೆ ಜಟಾಪಟಿ: ವಿಡಿಯೋ ನೋಡಿ