ಮಂಗಳೂರು: ನಿಯಂತ್ರಣ ಕಳೆದುಕೊಂಡ ಬೆಂಜ್ ಕಾರೊಂದು (Benz Car) ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿಯ ಉಜಿರೆಯಲ್ಲಿ (Ujire)ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಉಜಿರೆ ನಿವಾಸಿ ಪ್ರಜ್ವಲ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಉರುಳಿ ಬಿದ್ದಿತ್ತು. ಅಪಘಾತದ ತೀವ್ರತೆಗೆ ಐಷಾರಾಮಿ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್ ಅಪಘಾತ – ಐವರು ಭಾರತೀಯ ಯೋಧರು ಹುತಾತ್ಮ
ತಕ್ಷಣ ಸ್ಥಳೀಯರು ಪ್ರಜ್ವಲ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ನೇ ವಯಸ್ಸಿಗೆ ಬಾಲಕಿ ಗರ್ಭಿಣಿ – ಹೊಟ್ಟೆನೋವಿನಿಂದ ಸಾವು