ಚಿಕ್ಕಮಗಳೂರು: ಶಿಕ್ಷಕರೊಬ್ಬರನ್ನು (Teacher) ಬೇರೊಂದು ಶಾಲೆಗೆ (School) ವರ್ಗಾವಣೆ ಮಾಡಲು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಜಿಲ್ಲೆಯ ಕಡೂರು ತಾಲೂಕಿನ ಬಿಇಒ (BEO) ಕೆ.ಎನ್.ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಡೂರು ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (Government School) ನಿಯೋಜನೆ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪರನ್ನ ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಬಿಇಒ 15 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ಮಧ್ಯಾಹ್ನ ಜಿ.ತಿಮ್ಮಾಪುರ ಗೇಟ್ ಬಳಿ ಹಣ ಪಡೆಯುವಾಗ ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದಾಂಡಿಯಾ ನೃತ್ಯ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು
Advertisement
Advertisement
ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ (National Highway) ಜಿ.ತಿಮ್ಮಾಪುರ ಗೇಟ್ ಬಳಿ 15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಸಂಜೆವರೆಗೂ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ನಂತರ ಬಿಇಒ ಕೆ.ಎನ್.ರಾಜಣ್ಣ ಅವರನ್ನ ಚಿಕ್ಕಮಗಳೂರು ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸದೇ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಗೆ ಬಂಧನದ ಭೀತಿ
Advertisement
Advertisement
ದಾಳಿಯಲ್ಲಿ ವೃತ್ತ ನಿರೀಕ್ಷಕರಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್, ಸಿಬ್ಬಂದಿ ಚೇತನ್, ಸಲೀಂ, ಲೋಕೇಶ್, ವಿಜಯಭಾಸ್ಕರ್, ಸವಿನಯ, ರವಿಚಂದ್ರ ಇದ್ದರು.