ಚಿಕ್ಕಮಗಳೂರು: ಬಿಇಓ ಕಚೇರಿಯ (BEO Office) ವ್ಯವಸ್ಥಾಪಕ ಅಧಿಕಾರಿ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕಡೂರು ತಾಲೂಕು ಮೂಲದ ನಿಂಗನಾಯಕ (57) ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ. ಸೋಮವಾರ (ಜ.1) ಬೆಳಿಗ್ಗೆ ಬಿಇಓ ಕಚೇರಿಯಲ್ಲೇ ಡೆತ್ ನೋಟ್ (Death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ ಅತ್ಯಾಚಾರಿ ಆರೋಪಿ ಮೌಲ್ವಿ- ಸ್ಫೋಟಕ ಸತ್ಯ ಬಯಲು
Advertisement
Advertisement
ಕಳೆದ ಎರಡು ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದ ನಿಂಗನಾಯಕ ಕೆಲಸದ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Advertisement
ಸೋಮವಾರ ಬೆಳಗ್ಗೆ ಮನೆಗೆ ಹಾಲು ತಂದುಕೊಟ್ಟ ನಿಂಗನಾಯಕ ಮನೆಯಲ್ಲಿ ವಾಕಿಂಗ್ ಹೋಗಿ ಬರ್ತೀನಿ ಅಂತ ಕಚೇರಿ ಕೀ ತೆಗೆದುಕೊಂಡು ಹೋಗಿದ್ದರು. ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬನ್ನೇರುಘಟ್ಟಕ್ಕೆ ಹೊಸ ಅತಿಥಿಯ ಆಗಮನ- ಹೆಣ್ಣು ಮರಿಗೆ ಜನ್ಮ ನೀಡಿದ ಆನೆ ರೂಪಾ
Advertisement
ಶಿಕ್ಷಣ ಇಲಾಖೆಯಲ್ಲಿ (Education Department) ಕೆಲಸದ ಒತ್ತಡ ಅಧಿಕವಾಗಿತ್ತು. ಡಿ-ಗ್ರೂಪ್ ನೌಕರರು ಕಡಿಮೆ ಇದ್ದರು. ಇದರಿಂದ ಕೆಲಸಗಳು ಆಗದೇ ಭಾನುವಾರವೂ ಕೆಲಸ ಮಾಡುವ ಪರಿಸ್ಥಿತಿ ಇತ್ತು. ಭಾನುವಾರ (ಡಿ.31) ಸಹ ಕಚೇರಿಗೆ ಹೋಗಿ ಕೆಲಸ ಮಾಡಿದ್ದರು. ಆದರೂ ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ರೆ ಬರುತ್ತಿರಲಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆ – ಮಂತ್ರಾಲಯ ರಾಯರ ಮಠಕ್ಕೆ ಹರಿದು ಬಂದ ಭಕ್ತಸಾಗರ