ಬೆಂಗಳೂರು: ಗೃಹ ಜ್ಯೋತಿ ಯೋಜನೆಯ(Gruha Jyothi Scheme) ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿರುವುದರಿಂದ ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ. ಬದಲಿಗೆ ಗ್ರಾಹಕರಿಗೆ ಸರಾಸರಿ ಬಿಲ್ (Average Bill) ನೀಡಲಾಗುತ್ತದೆ.
ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಿ, ಅದನ್ನು SMS ಮೂಲಕ ಕಳುಹಿಸಲಾಗುವುದು. ಇದನ್ನೂ ಓದಿ: Gruha Jyothi| ಮನೆಗೆ ಬಂದು ನಡೆಯಲಿದೆ ಪರಿಶೀಲನೆ – ಮಾಲೀಕರು ಏನು ದಾಖಲೆ ಕೊಡಬೇಕು?
ಎಚ್‌ಟಿ (HT) ಗ್ರಾಹಕರು, 40 HP ಹಾಗೂ ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್‌ಟಿ (LT) ಗ್ರಾಹಕರು, ಸೋಲಾರ್ ರೂಫ್‌ಟಾಪ್ (SRTPV) ಗ್ರಾಹಕರು ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಎಂದಿನಂತೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ
ಜುಲೈ ತಿಂಗಳ ಸರಾಸರಿ ಬಿಲ್‌ನಲ್ಲಿ ಏನಾದರೂ ವ್ಯತ್ಯಾಸಗಳಿದ್ದರೆ (ಹೆಚ್ಚು ಅಥವಾ ಕಡಿಮೆ), ಆಗಸ್ಟ್ ತಿಂಗಳಿನಿಂದ ನೈಜ ಮೀಟರ್ ರೀಡಿಂಗ್ ಆರಂಭವಾದಾಗ ಅದನ್ನು ಮುಂದಿನ ಬಿಲ್‌ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ ಮಾಡಲಾಗುವುದು ಎಂದು ಬೆಸ್ಕಾಂ (BESCOM) ಪ್ರಕಟಣೆಯಲ್ಲಿ ತಿಳಿಸಿದೆ.
ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳ ಪರಿಶೀಲನಾ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಬೇಕು. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ ತೋರಿಸಬೇಕಾಗುತ್ತದೆ.

