ತುಮಕೂರು: ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿ ಮೇಲೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
Advertisement
ಇಂದು ಬೆಳಗ್ಗೆ ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ವೇಳೆ ಗ್ರಾಮಸ್ಥರು ಏಕಾಏಕಿ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಕಲ್ಲು, ದೊಣ್ಣೆಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಬೆಸ್ಕಾಂ ಶಾಖಾಧಿಕಾರಿ ರಾಜಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರ – ಶಿವನ ಭಕ್ತನಾಗಿದ್ದ ಗಾಂಜಾ ಆರೋಪಿ
Advertisement
Advertisement
ಗ್ರಾಮಸ್ಥರು ಹಾಗೂ ಬೆಸ್ಕಾಂ ಸಿಬ್ಬಂದಿಗಳ ನಡುವೆ ಬಿಲ್ ವಿಚಾರವಾಗಿ ಮೊದಲು ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಕಲ್ಲು, ದೊಣ್ಣೆಗಳಲ್ಲಿ ಹಲ್ಲೆ ನಡೆಸಿದ್ದಾರೆ. ಲೈನ್‍ಮ್ಯಾನ್ ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರು ಶಿರಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಸ್ಥರು ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದ್ದು, ಇದೀಗ ವೈರಲ್ ಆಗ ತೊಡಗಿದೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ
Advertisement