ಇಸ್ಲಾಮಾಬಾದ್: ಅಕ್ಟೋಬರ್ 5 ರಿಂದ ನವೆಂಬರ್ 19ರ ವರೆಗೆ ನಡೆಯಲಿರುವ ಏಕದಿನ ವಿಶ್ವಕಪ್ (ICC ODI World Cup) ವೇಳಾಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಭಾರತಕ್ಕೆ ಬರಲು ಪಾಕಿಸ್ತಾನ (Pakistan) ಕ್ರಿಕೆಟ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಪಾಕ್ ತಂಡದ ಪರ ಬ್ಯಾಟಿಂಗ್ ಮಾಡಿರುವ ಮಾಜಿ ನಾಯಕ ವಾಸಿಂ ಅಕ್ರಂ, ಪಾಕಿಸ್ತಾನ 2ನೇ ಬಾರಿಗೆ ವಿಶ್ವಕಪ್ ಟ್ರೋಫಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1992ರಲ್ಲಿ ಇಮ್ರಾನ್ ಖಾನ್ (Imran Khan) ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಮೊದಲಬಾರಿಗೆ ವಿಶ್ವಕಪ್ ಕಿರೀಟ ಧರಿಸಿತ್ತು.
ಈ ಕುರಿತು ಮಾತನಾಡಿರುವ ಅವರು, ನಮ್ಮ ತಂಡದಲ್ಲಿ ಬೆಸ್ಟ್ ಪ್ಲೇಯರ್ ಇದ್ದಾನೆ ನಾವು, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ. ನಾವು ಉತ್ತಮ ತಂಡ ಹೊಂದಿದ್ದೇವೆ. ಆಧುನಿಕ ಕ್ರಿಕೆಟ್ ಯುಗದಲ್ಲಿ ಬಾಬರ್ ಆಜಂ (Babar Azam) ಒಬ್ಬ ಶ್ರೇಷ್ಠ ಬ್ಯಾಟ್ಸ್‌ಮ್ಯಾನ್ ಅವರು ಪಾಕ್ ತಂಡವನ್ನ ಮುನ್ನಡೆಸುತ್ತಿದ್ದಾರೆ. ಭಾರತದಲ್ಲಿ ಎಲ್ಲ ರೀತಿಯ ಪರಿಸ್ಥಿತಿಗಳಲ್ಲೂ ಅವರು ಆಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ Vs ಐರ್ಲೆಂಡ್ T20 ಸರಣಿಗೆ ವೇಳಾಪಟ್ಟಿ ಪ್ರಕಟ – ಇಲ್ಲಿದೆ ಡಿಟೇಲ್ಸ್
2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ 9 ಪಂದ್ಯಗಳ ಪೈಕಿ 5ರಲ್ಲಿ ಗೆಲುವು ಸಾಧಿಸಿತ್ತು. ಆದ್ರೆ ಸೆಮಿಸ್‌ಗೆ ಸ್ಥಾನ ಪಡೆಯುವಲ್ಲಿ ವಿಫಲವಾಯಿತು. ಆ ನಂತರದಲ್ಲೂ ಬಾಬರ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂತಹ ಸ್ಫೂರ್ತಿದಾಯಕ ನಾಯಕ ವಿಶ್ವಕಪ್‌ನಲ್ಲಿ ಇನ್ನಷ್ಟು ಬ್ಯಾಟಿಂಗ್ ಫಾರ್ಮ್‌ಗೆ ಮರಳುವುದರಲ್ಲಿ ಆಶ್ಚರ್ಯವಿಲ್ಲ ಎಂದು ಹೇಳಿದ್ದಾರೆ.
ಅಲ್ಲದೇ, ಬಾಬರ್ ನಮ್ಮ ತಂಡದಲ್ಲಿರುವ ಅತ್ಯುತ್ತಮ ಆಟಗಾರ. ಇಡೀ ದೇಶ ಅವರನ್ನ ಅನುಸರಿಸುತ್ತದೆ. ಅವರು ತಮ್ಮ ತಂಡವನ್ನು ಕ್ರೀಡಾಂಗಣಕ್ಕೆ ಕರೆದೊಯ್ಯುತ್ತಾರೆ. ಅದು ಟಿ20, ಏಕದಿನ, ಟೆಸ್ಟ್ ಕ್ರಿಕೆಟ್ ಯಾವುದೇ ಆಗಿರಲಿ ಅವರು ಯಶಸ್ವಿಯಾಗಿ ತಂಡವನ್ನ ಮುನ್ನಡೆಸುತ್ತಾರೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ವೇಳಾಪಟ್ಟಿ ಹೊರಬಿದ್ದ ಬೆನ್ನಲ್ಲೇ ಭಾರತಕ್ಕೆ ಬರಲು ಪಾಕ್ ಆಕ್ಷೇಪ
ಈ ನಡುವೆ ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ಭಾಗವಹಿಸುವ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಪಾಕಿಸ್ತಾನಕ್ಕೆ ನೆನಪಿಸಿದೆ.
ಭಾರತದಲ್ಲಿ ಪಾಕ್ ತಂಡದ ವೇಳಾಪಟ್ಟಿ ಹೀಗಿದೆ…
ಪಾಕಿಸ್ತಾನ vs ಕ್ವಾಲಿಫೈಯರ್ 1, ಅಕ್ಟೋಬರ್ 6 – ಹೈದರಾಬಾದ್
ಪಾಕಿಸ್ತಾನ vs ಕ್ವಾಲಿಫೈಯರ್ 2, ಅಕ್ಟೋಬರ್ 12 – ಹೈದರಾಬಾದ್
ಪಾಕಿಸ್ತಾನ vs ಭಾರತ, ಅಕ್ಟೋಬರ್ 15 – ಅಹಮದಾಬಾದ್
ಪಾಕಿಸ್ತಾನ vs ಆಸ್ಟ್ರೇಲಿಯಾ, ಅಕ್ಟೋಬರ್ 20 – ಬೆಂಗಳೂರು
ಪಾಕಿಸ್ತಾನ vs ಅಫ್ಘಾನಿಸ್ತಾನ, ಅಕ್ಟೋಬರ್ 23- ಚೆನ್ನೈ
ಪಾಕಿಸ್ತಾನ vs ದಕ್ಷಿಣ ಆಫ್ರಿಕಾ, ಅಕ್ಟೋಬರ್ 27- ಚೆನ್ನೈ
ಪಾಕಿಸ್ತಾನ vs ಬಾಂಗ್ಲಾದೇಶ, ಅಕ್ಟೋಬರ್ 31 – ಕೋಲ್ಕತ್ತಾ
ಪಾಕಿಸ್ತಾನ vs ನ್ಯೂಜಿಲೆಂಡ್, ನವೆಂಬರ್ 4 – ಬೆಂಗಳೂರು
ಪಾಕಿಸ್ತಾನ vs ಇಂಗ್ಲೆಂಡ್, ನವೆಂಬರ್ 12- ಕೋಲ್ಕತ್ತಾ