ಬೆಳಗಾವಿ: ಮನೆ ಬೆಳಗುವ ಹೆಣ್ಣು ಮಕ್ಕಳಿಗೆ ಬಿಜೆಪಿ ಪಕ್ಷ ಮಹಿಳಾ ಮೋರ್ಚಾ ಎಂಬ ಉತ್ತಮ ವೇದಿಕೆ ಒದಗಿಸಿಕೊಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದಿರುವ ಸುಕನ್ಯಾ ಸಮೃದ್ಧಿ ಯೋಜನೆ, ಬೇಟಿ ಬಚಾವೋ-ಬೇಟಿ ಪಡಾವೋ ಹೀಗೆ ಹಲವು ಯೋಜನೆಗಳು ಬಡ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗುತ್ತಿವೆ ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಆಡಿ ಗ್ರಾಮದಲ್ಲಿ ಬಿಜೆಪಿ ನಿಪ್ಪಾಣಿ ಮಂಡಲ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿ ಜತೆಗೆ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸಕ್ಕೆ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಕಾರ್ಯಕರ್ತೆಯರಿಗೆ ಸಂದೇಶ ರವಾನಿಸಿದರು. ಹಾಗೂ ನಿಪ್ಪಾಣಿ ಮಹಿಳಾ ಮೋರ್ಚಾ ಸದಸ್ಯರು ಈಗಾಗಲೇ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಅಭಿನಂದನೆ ತಿಳಿಸಿದರು. ಇದನ್ನೂ ಓದಿ: ಚೇತನ್ ಅಹಿಂಸಾ ಬಿಡುಗಡೆ – ಖುಷ್ ಆದ ಅಭಿಮಾನಿಗಳು
Advertisement
Advertisement
ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಜ್ಯೋತಿ ಚಿಂಚಲಿಕರ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಪ್ರಭಾರಿ ವಿಜಯಲಕ್ಷ್ಮೀ ಉತಮನಳ್ಳಿ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಸಹಪ್ರಭಾರಿ ವಿಜಯಲಕ್ಷ್ಮೀ ಅಮಿದಬಾನಿ, ಮಹಿಳಾ ಮೋರ್ಚಾ ಅಧ್ಯಕ್ಷ ಶಾಂಭವಿ ಅಶ್ವತಪೂರ, ವಿಭಾವರಿ ಖಾಂಡಕೆ, ಸರೋಜಿನಿ ಜಮದಾಡೆ, ಮಹಿಳಾ ಮೋರ್ಚಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಾವು ನೋವುಗಳಿಗೆ ಮುಕ್ತಿ ನೀಡಿದ್ದಾರೆ ಗಡ್ಕರಿ: ಸಿಎಂ