ಗದಗ: ತಹಶೀಲ್ದಾರ್ ಕಚೇರಿಯಲ್ಲಿ ನ್ಯಾಯ ಕೇಳಲು ಹೋದ ಯುವಕನ ಮೇಲೆ ಹಲ್ಲೆ ಮಾಡಿದ ಉಪತಹಶೀಲ್ದಾರ್‌ರನ್ನ(Deputy Tahsildar) ಅಮಾನತು ಮಾಡಲಾಗಿದೆ.
ಮೇ 17ರಂದು ರಾತ್ರಿ ಉಪತಹಶೀಲ್ದಾರ್ ಡಿ.ಟಿ ವಾಲ್ಮೀಕಿ(D T Valmiki), ಕಾಂಗ್ರೆಸ್ ಮುಖಂಡ ವಿದ್ಯಾಧರ್ ದೊಡ್ಡಮನಿ ಹಾಗೂ ಸಹಚರರು ಒಟ್ಟಾಗಿ ಅಕ್ಷಯ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಅಕ್ಷಯ್ ಎಂಬ ಯುವಕ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಕಾರಿನಲ್ಲಿ ಬಂದ ಉಪತಹಶೀಲ್ದಾರ್ ಹಾಗೂ ಅವರ ಸಹಚರರು ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿ ನ್ಯಾಯ ಕೇಳಲು ಹೋದ ಯುವಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಉಲ್ಟಾ ಹೊಡೆದ ಡಿಕೆಶಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗದ ಬೆಟಗೇರಿ ನಾಡಕಚೇರಿಯ ಉಪತಹಶೀಲ್ದಾರ್ ಡಿ.ಟಿ ವಾಲ್ಮೀಕಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಆದೇಶಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್ ಕಿರುಕುಳ – ಕೆರೆಗೆ ಹಾರಿ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ
ಕರ್ನಾಟಕ ನಾಗರಿಕ ಸೇವಾ 1957ರ ನಿಯಮದಡಿ ಕಲ್ಪಿಸಿರುವ ಅವಕಾಶಗಳ ಮೇರೆಗೆ ಅಧಿಕಾರಿ ಮೇಲೆ ಶಿಸ್ತು ಕ್ರಮ ಜರುಗಿಸಿದ್ದು, ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.