ಬೆಂಗಳೂರು: ಮಾನ್ಯತೆ ಪಡೆಯದ ಬೆಟ್ಟಿಂಗ್ ಆಪ್ ಬಗ್ಗೆ ಪ್ರಮೋಟ್ (Betting App Promote) ಮಾಡಿದ ಆರೋಪದ ಮೇಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ಗೌಡ (Sonu Srinivas Gowda) ಸೇರಿದಂತೆ 100ಕ್ಕೂ ಅಧಿಕ ರೀಲ್ಸ್ ಸ್ಟಾರ್ಗಳಿಗೆ ನೋಟಿಸ್ ನೀಡಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ತಮ್ಮ ತಮ್ಮ ಇನ್ಸ್ಟಾಗ್ರಾಂ ಪೇಜ್ಗಳಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದ ರೀಲ್ಸ್ ಸ್ಟಾರ್ಗಳಿಗೆ (Reels Stars) ಶಾಕ್ ಎದುರಾಗಿದೆ. ತಮ್ಮ ಪೇಜ್ಗಳಲ್ಲಿ ಬಿತ್ತರಿಸಿದ್ದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿದ್ದವು. ಹಾಗಾಗಿ ವಕೀಲರೊಬ್ಬರು ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ ದೂರು ಕೊಟ್ಟಿದ್ದರು. ಸೋಶಿಯಲ್ ಮೀಡಿಯಾ ಪೇಜ್ಗಳಲ್ಲಿ ಜನರಿಗೆ ವಂಚಿಸುವ ಜಾಹೀರಾತು ಪ್ರಕಟಿಸಿದ್ದ ರೀಲ್ಸ್ ಸ್ಟಾರ್ಗಳ ಪಟ್ಟಿ ಮಾಡಿ ಸೈಬರ್ ಕ್ರೈಂ (Cyber Crime) ಪೊಲೀಸರು ನೋಟಿಸ್ ನೀಡಿದ್ದರು. ಇದನ್ನೂ ಓದಿ: ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ದರ್ಶನ್, ಪವಿತ್ರ ಗೌಡ
ಸೋನು ಶ್ರೀನಿವಾಸ್ಗೌಡ, ದೀಪಕ್ಗೌಡ, ವರುಣ್ ಆರಾದ್ಯ, ದಚ್ಚು ಸೇರಿ ನೂರಕ್ಕು ಹೆಚ್ಚು ಮಂದಿ ರೀಲ್ಸ್ ಸ್ಟಾರ್ಗಳಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿದ್ದಾರೆ. ವಿಚಾರಣೆಗೆ ಹಾಜರಾದ ಸ್ಟಾರ್ಗಳು ಇನ್ನು ಮುಂದೆ ಇಂತಹ ಜಾಹೀರಾತುಗಳನ್ನ ನಾವು ಪ್ರಕಟಿಸುವುದಿಲ್ಲ. ಈ ಜಾಹೀರಾತು ಪ್ರಕಟಿಸುವುದರಿಂದ ಜನರಿಗೆ ಸಮಸ್ಯೆ ಆಗುತ್ತದೆ ಎಂಬ ಅರಿವಿಲ್ಲದೇ ನಾವು ಪ್ರಕಟಿಸಿದ್ದೇವೆ. ನಾವು ಮಾಡಿದ್ದ ತಪ್ಪಿನ ಬಗ್ಗೆ ಅರಿವಿಗೆ ಬಂದಿದ್ದು, ಜಾಹೀರಾತುಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಜನರಿಗೆ ವಂಚಿಸುವ ಜಾಹೀರಾತುಗಳು ಇನ್ನೊಮ್ಮೆ ಪ್ರಕಟಿಸಿದರೆ ಜೈಲಿಗೆ ಕಳಿಸುವ ಎಚ್ಚರಿಕೆಯನ್ನು ಸೈಬರ್ ಕ್ರೈಂ ಪೊಲೀಸರು ನೀಡಿದ್ದಾರೆ. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಚಾರ – ದೇವರಕೊಂಡ, ಪ್ರಕಾಶ್ ರಾಜ್, ರಾಣಾ ಸೇರಿದಂತೆ 25 ಮಂದಿ ಮೇಲೆ ಕೇಸ್