ರಾಮನಗರ: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಭರಾಟೆ ಮುಗಿದಿದೆ. ಇನ್ನೇನಿದ್ದರೂ ಫಲಿತಾಂಶ ಬರಬೇಕು. ಈ ನಡುವೆ ಗೆಲ್ಲುವ ಕುದುರೆ ಯಾರೆಂಬ ಲೆಕ್ಕಾಚಾರ ತೀವ್ರಗೊಂಡಿದೆ. ಕ್ಷೇತ್ರಗಳಲ್ಲಿ ಬೆಟ್ಟಿಂಗ್ ಭರ್ಜರಿಯಾಗಿ ನಡೆಯುತ್ತಿದ್ದು, ಶಿಗ್ಗಾಂವಿ, ಸಂಡೂರು ಕ್ಷೇತ್ರಕ್ಕಿಂತ ಚನ್ನಪಟ್ಟಣವೇ (Channapatna) ಎಲ್ಲರ ಫೇವರೆಟ್ ಆಗಿದೆ. ದೊಡ್ಡ ಮಟ್ಟದಲ್ಲೇ ಇಲ್ಲಿ ಬಾಜಿ ನಡೆಯುತ್ತಿದೆ.
ಇಡೀ ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣ ಉಪಚುನಾವಣೆಯ (By Election) ಮತದಾನ ಮುಗಿದಿದ್ದು, ಇದೀಗ ಕ್ಷೇತ್ರದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಜೊತೆಗೆ ಬೆಟ್ಟಿಂಗ್ ಭರಾಟೆ ಕೂಡಾ ಹೆಚ್ಚಾಗಿದೆ. ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ಸಿ.ಪಿ ಯೋಗೇಶ್ವರ್ (CP Yogeshwar) ತುರುಸಿನ ಫೈಟ್ ನಡೆದಿದೆ. ಈ ಚುನಾವಣೆ ತೀವ್ರ ಹಣಾಹಣಿಗೆ ಕಾರಣವಾಗಿದೆ. ಹೀಗಾಗಿ ಚನ್ನಪಟ್ಟಣದತ್ತ ಬೆಟ್ಟಿಂಗ್‌ದಾರರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ – ಜಮೀರ್ ವಿರುದ್ಧ ದೂರು
Advertisement
Advertisement
ಸೋಲು, ಗೆಲುವು ಹಾಗೂ ಗೆಲುವಿನ ಅಂತರಕ್ಕೆ ಲಕ್ಷ ಲಕ್ಷ ಹಣ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಚನ್ನಪಟ್ಟಣ ತಾಲೂಕು ಮಾತ್ರವಲ್ಲದೇ ಅಕ್ಕಪಕ್ಕದ ತಾಲೂಕುಗಳು, ಜಿಲ್ಲೆಗಳಲ್ಲೂ ಸಹ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಅಲ್ಲದೇ ಗುರುವಾರ ಸಿ.ಪಿ.ಯೋಗೇಶ್ವರ್ ಹೇಳಿಕೆ ಬಳಿಕವೂ ಬೆಟ್ಟಿಂಗ್ ಕಟ್ಟುವವರ ಸಂಖ್ಯೆ ಕೂಡಾ ಹೆಚ್ಚಾಗಿದೆ. ಯಾವ ಭಾಗದಲ್ಲಿ ಯಾರಿಗೆ ಲೀಡ್, ಎಷ್ಟು ಮತಗಳು ಲೀಡ್ ಸೇರಿದಂತೆ ಇನ್ನಿತರ ವಿಚಾರಗಳ ಮೇಲೂ ಒನ್ ಟು ಡಬಲ್ ಎಂಬತೆ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 10 ಮಕ್ಕಳು ಸಜೀವ ದಹನ
Advertisement
ಚುನಾವಣೆಯ ಕೊನೆಯ ಹಂತದಲ್ಲಿ ಸಚಿವ ಜಮೀರ್ ಅಹ್ಮದ್ (Zameer Ahmed) ನೀಡಿದ್ದ ‘ಕರಿಯ’ ಹೇಳಿಕೆ ಚುನಾವಣೆಯಲ್ಲಿ ಪ್ರಭಾವ ಬೀರಿದೆ. ಇದನ್ನು ಸ್ವತಃ ಸಿಪಿವೈ ಒಪ್ಪಿಕೊಂಡಿದ್ದಾರೆ. ಇನ್ನು ಚನ್ನಪಟ್ಟಣದಲ್ಲಿ ಗೆಲ್ಲುವ ಬಗ್ಗೆ ಪೂರ್ತಿ ವಿಶ್ವಾಸವನ್ನು ಅವರು ವ್ಯಕ್ತಪಡಿಸಿಲ್ಲ. ಸಿಪಿವೈ ಈ ಹೇಳಿಕೆ ಬೆಟ್ಟಿಂಗ್ ಮೇಲೂ ಪ್ರಭಾವ ಬೀರಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ
Advertisement
ಚನ್ನಪಟ್ಟಣದ ಜೊತೆಗೆ ಮಂಡ್ಯದವರೂ (Mandya) ಕೂಡ ಹೆಚ್ಚಿನ ಪ್ರಮಾಣದಲ್ಲಿ ಬೆಟ್ಟಿಂಗ್‌ಗೆ ಇಳಿದಿದ್ದಾರೆ. ಮಂಡ್ಯ ಜಿಲ್ಲೆಯದ್ದಾಗಲಿ, ಪಕ್ಕದ ಜಿಲ್ಲೆಯದ್ದಾಗಲಿ ಒಂದು ಕೈ ನೋಡೇ ಬಿಡೋಣಾ ಎಂದು ಬೆಟ್ಟಿಂಗ್ ಕಟ್ಟುತ್ತಾರೆ. ಇದೀಗ ಮಂಡ್ಯ ಜಿಲ್ಲೆಯ ಜನರ ಕಣ್ಣು ಬಿದ್ದಿರೋದು ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಮೇಲೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪರ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮಾಡಿದ್ದು ಸಹ ಮಂಡ್ಯ ಜಿಲ್ಲೆಯ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು. ಮತದಾನದ ಬಳಿಕ ಕಾರ್ಯಕರ್ತರು ಮಾತ್ರವಲ್ಲ ಸಾಮಾನ್ಯ ಜನರು ಸಹ ಈ ಫಲಿತಾಂಶದ ಮೇಲೆ ಬಾಜಿ ಕಟ್ಟುತ್ತಿದ್ದಾರೆ. ಇದೀಗ ಯೋಗೇಶ್ವರ್ ಯಾರೇ ಗೆದ್ದರೂ ಕೂದಳೆಯ ಅಂತರದಲ್ಲಿ ಗೆಲ್ಲುತ್ತಾರೆ ಎಂಬ ಹೇಳಿಕೆ ಬಳಿಕ ಬೆಟ್ಟಿಂಗ್ ಲೆಕ್ಕಾಚಾರ ಬದಲಾಗಿದೆ. ಇದನ್ನೂ ಓದಿ: ಹಾಸನ| 1.49 ಕೋಟಿ ಹಣ ದುರುಪಯೋಗ ಆರೋಪ – ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಮಾನತು
50:50 ಅನುಪಾತದಲ್ಲಿ ಬೆಟ್ಟಿಂಗ್ ನಡೆದಿದೆ. ಈಗ ಸದ್ಯ ಒಂದು ಲಕ್ಷಕ್ಕೆ ಒಂದು ಲಕ್ಷ ಎಂಬಂತೆ ಸ್ಟ್ರೈಟ್ ಫೈಟ್ ಬೆಟ್ಟಿಂಗ್ ಮಾಡಲಾಗುತ್ತಿದೆ. ಸಕ್ಕರೆ ನಾಡಲ್ಲಿ ಬೊಂಬೆ ನಗರಿಯ ಅಧಿಪತಿ ಯಾರು ಎಂದು ಬೆಟ್ಟಿಂಗ್ ನಡೆಯುತ್ತಿದೆ. ಮೂಲಗಳ ಪ್ರಕಾರ ಚನ್ನಪಟ್ಟಣ ಹಾಗೂ ರಾಮನಗರ ಜಿಲ್ಲೆಗಿಂತ ಮಂಡ್ಯ ಜಿಲ್ಲೆಯಲ್ಲಿಯೇ ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಮೇಲೆ ಬೆಟ್ಟಿಂಗ್ ಕಟ್ಟುತ್ತಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಬೆಟ್ಟಿಂಗ್ ಕಾನೂನು ಬಾಹಿರವಾದರೂ ಬಾಜಿ ಕಟ್ಟಿ ನೋಡು ಬಾರಾ ಮೀಸೆ ಮಾವಾ ಅನ್ನೋ ಹಾಡು ಇದೀಗ ಚನ್ನಪಟ್ಟಣ ಚುನಾವಣೆಗೆ ಅನ್ವಯಿಸುತ್ತಿದೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಸಚಿವ ಜಮೀರ್ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್