ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾಢಳಿತದಿಂದ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೂ ಖಾಸಗಿ ಶಿಕ್ಷಣ ಸಂಸ್ಥೆ ಪರೀಕ್ಷೆ ನಡೆಸುತ್ತಿದೆ.
ಕುವೆಂಪುನಗರದ ಬಿಜಿಎಸ್ ವಿದ್ಯಾಪೀಠ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದೆ. ಭಾತರ್ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರೋಧದ ನಡುವೆಯೂ ಜಿಲ್ಲಾಡಳಿತ ಇಂದು ಶಾಲಾ-ಕಾಲೇಜಿಗೆ ರಜೆಯನ್ನು ಘೋಷಣೆ ಮಾಡಿತ್ತು. ಆದರೆ ಜಿಲ್ಲಾಡಳಿತದ ಆದೇಶವನ್ನೇ ಧಿಕ್ಕರಿಸಿ ಶಿಕ್ಷಣ ಸಂಸ್ಥೆ ಪರೀಕ್ಷೆ ನಡೆಸುತ್ತಿತ್ತು.
Advertisement
Advertisement
ಅಷ್ಟೇ ಅಲ್ಲದೇ ಬಿಜಿಎಸ್ ಕಾಲೇಜಿನ ಗೇಟ್‍ಗೆ ಬೀಗ ಹಾಕಿ ಇಂದು ರಜೆ ಎಂದು ಬೋರ್ಡ್ ನೇತುಹಾಕಿದೆ. ಆದರೆ ಒಳಗೆ ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸುತ್ತದೆ. ಜಿಲ್ಲಾಡಳಿತಕ್ಕೆ ಸೆಡ್ಡು ಹೊಡೆದು ಪರೀಕ್ಷೆ ನಡೆಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಇಬ್ಬರು ಪೊಲೀಸರು ಆಗಮಿಸಿದ್ದಾರೆ. ಪೊಲೀಸರು ಬಂದ ಮೇಲೆ ಪರೀಕ್ಷೆಯನ್ನು ನಿಲ್ಲುಸುತ್ತೇವೆ ಅಂತ ಕಾಲೇಜು ಮಂಡಳಿ ಹೇಳಿದೆ ಎಂದು ಮಾಹಿತಿ ಲಭ್ಯವಾಗಿದೆ.
Advertisement
ಭಾರತ್ ಬಂದ್ ಕಾರಣಕ್ಕೆ ರಜೆ ಘೋಷಣೆ ಮಾಡಿದ್ದ ಜಿಲ್ಲಾಡಳಿತ ನಿರ್ಧಾರಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮೀಪಿಸುತ್ತಿದೆ. ಪಾಠ ಮುಗಿಸಲು ಸಮಯದ ಅಭಾವವಿದೆ. ಹೀಗಾಗಿ ಶಾಲಾ-ಕಾಲೇಜುಗಳ ಸೂಕ್ತ ರಕ್ಷಣೆಗೆ ಪತ್ರ ಬರೆದಿದ್ದೆವು. ಸ್ವಂಪ್ರೇರಿತವಾಗಿ ಕಾಲೇಜು ನಡೆಸಲು ಮುಂದಾಗಿದ್ದ ನಮಗೆ ಜಿಲ್ಲಾಡಳಿತ ಒತ್ತಾಯ ಪೂರ್ವಕವಾಗಿ ಬಂದ್ ನಡೆಸುವಂತೆ ಮಾಡಿದೆ. ಬೇಸರದಿಂದ ಶಾಲಾ ಕಾಲೇಜುಗಳನ್ನ ಬಂದ್ ಮಾಡುತ್ತಿದ್ದೇವೆ ಎಂದು ಸಿಬಿಎಸ್‍ಸಿ ಮತ್ತು ಐಸಿಎಸ್‍ಸಿ ರಾಜ್ಯ ಉಪಾಧ್ಯಕ್ಷ ಆರ್.ರಘು ಸ್ಪಷ್ಟನೆ ಕೊಟ್ಟಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv