Districts
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

ಶಿವಮೊಗ್ಗ: ಭದ್ರಾವತಿಯಲ್ಲಿ ಕಬ್ಬಡಿ ಪಂದ್ಯದಲ್ಲಿ ನಡೆದಿದ್ದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಬಂಧನವಾಗಿದೆ. ಬಸವೇಶ್ ಸೇರಿದಂತೆ ಇದುವರೆಗೂ 15 ಜನರನ್ನ ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 28ರಂದು ಕಬ್ಬಡಿ ಪಂದ್ಯದ ವೇಳೆ ಬಿಜೆಪಿ ಕಾರ್ಯಕರ್ತರು ಜೈಶ್ರೀರಾಮ ಘೋಷಣೆ ಕೂಗಿದ್ದರು. ಈ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಘಟನೆಯಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಹಲ್ಲೆ ಸಂಬಂಧ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿದ್ದವು.
ದೂರು ದಾಖಲಾದ ನಂತರ ಶಾಸಕ ಸಂಗಮೇಶ್ ಪುತ್ರ ತಲೆ ಮರೆಸಿಕೊಂಡು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇಂದು ಬೆಳಗಿನ ಜಾವ ಚಳ್ಳಕೆರೆ ಬಳಿ ಶಾಸಕ ಪುತ್ರ ಬಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
