Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲಾ ಪಠ್ಯದಲ್ಲಿ ಭಗವದ್ಗೀತೆ – ಶಿಕ್ಷಣ ಸಚಿವರ ವಿರುದ್ಧ ಹೆಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಾಲಾ ಪಠ್ಯದಲ್ಲಿ ಭಗವದ್ಗೀತೆ – ಶಿಕ್ಷಣ ಸಚಿವರ ವಿರುದ್ಧ ಹೆಚ್‌ಡಿಕೆ ಕಿಡಿ

Districts

ಶಾಲಾ ಪಠ್ಯದಲ್ಲಿ ಭಗವದ್ಗೀತೆ – ಶಿಕ್ಷಣ ಸಚಿವರ ವಿರುದ್ಧ ಹೆಚ್‌ಡಿಕೆ ಕಿಡಿ

Public TV
Last updated: March 18, 2022 10:55 pm
Public TV
Share
2 Min Read
HD Kumaraswamy 1 1
SHARE

ಹಾಸನ: ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿಸಿ ನಾಗೇಶ್ ನೀಡಿರುವ ಹೇಳಿಕೆಗೆ ವಿರುದ್ಧವಾಗಿ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಟಿ. ಮಾಯಗೌಡನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಭಗವದ್ಗೀತೆಯನ್ನು ಕುಟುಂಬದಲ್ಲೇ ನಮ್ಮ ತಂದೆ-ತಾಯಿ, ಹಿರಿಯರು ಹೇಳಿಕೊಡುತ್ತಾರೆ. ಸರ್ಕಾರದ ಕೆಲಸ ಏನಿದ್ದರೂ ಉತ್ತಮ ಶಿಕ್ಷಣ ನೀಡಿ ಮಕ್ಕಳ ಬದುಕನ್ನು ಕಟ್ಟಿಕೊಡುವುದು. ಮಕ್ಕಳ ಭವಿಷ್ಯ ನಿರ್ಮಾಣ ಮಾಡುವಂತಹ ವಿಚಾರಗಳು, ಪಠ್ಯಗಳು ಶಾಲೆಗಳಲ್ಲಿ ಇರಬೇಕು ಎಂದರು. ಇದನ್ನೂ ಓದಿ: ಹೆಣ್ಣುಮಕ್ಕಳೇ ನಾನು ಪ್ರಧಾನಮಂತ್ರಿಯಾಗಲು ಶಕ್ತಿ ಕೊಟ್ಟಿದ್ದು: ಹೆಚ್‍ಡಿಡಿ

Bhagavad Gita made compulsory in Gujarat Schools for Classes 6 to 12

ನಾನು ಹಿಂದೂ ಬಂಧುಗಳಲ್ಲಿ ಮನವಿ ಮಾಡುತ್ತೇನೆ. ನಾನು ಹುಟ್ಟಿರುವುದೂ ಹಿಂದೂ ಕುಟುಂಬದಲ್ಲೇ. ನಮ್ಮ ಕುಟುಂಬ ದೈವದಲ್ಲಿ ಬಹಳ ನಂಬಿಕೆ ಇಟ್ಟು ಶ್ರದ್ಧೆಯಿಂದ ನಡೆದುಕೊಳ್ಳುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ನಮ್ಮ ಮಕ್ಕಳಿಗೆ ಬೇಕಿರುವುದು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಶಿಕ್ಷಣ. ಮೊದಲು ಆ ಕಡೆ ಗಮನ ಕೊಡಿ ಎಂದು ಹೇಳಿದರು.

ರಾಜ್ಯದಲ್ಲಿ ಕೇವಲ ಮತಬ್ಯಾಂಕ್‌ಗಾಗಿ ಇಂತಹ ಸೂಕ್ಷ್ಮ ವಿಚಾರಗಳು ಮುನ್ನೆಲೆಗೆ ಬರುತ್ತಿವೆ. ಒಂದು ಕಾಲದಲ್ಲಿ ವಿದ್ಯೆ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೇರಿದ್ದು ಎನ್ನುವ ವಾತಾವರಣ ಇತ್ತು. ಇಂದು ಅದೇ ವರ್ಗದ ಜನರು ಈ ರೀತಿಯ ವಾತಾವರಣ ಎಲ್ಲರ ಮೇಲೂ ಹೇರಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ಮಕ್ಕಳು ತಮ್ಮ ಜ್ಞಾನ ಬೆಳೆಸಿಕೊಳ್ಳಲು, ಉತ್ತಮ ವಿದ್ಯಾಭ್ಯಾಸ ಮಾಡಲು ಸಾಕಷ್ಟು ನ್ಯೂನತೆಗಳಿವೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಮಸ್ಯೆಗಳಿವೆ. ಮೊದಲು ಅವುಗಳನ್ನು ಸರಿ ಮಾಡಬೇಕು. ಇದನ್ನು ಮಾಡುವುದು ಬಿಟ್ಟು ಸೂಕ್ಷ್ಮ ವಿಷಯಗಳನ್ನು ಕೆದಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಎಂದು ಭಗವದ್ಗೀತೆಯಲ್ಲಿ ಹೇಳಿದ್ದಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನಮಾಡಲು ಕುಟುಂಬಸ್ಥರ ನಿರ್ಧಾರ

HD Kumaraswamy 2

ಭಗವದ್ಗೀತೆಯಲ್ಲಿ ಇರುವುದು ‘ಧರ್ಮೋ ರಕ್ಷತಿ ರಕ್ಷಿತಃ’ ಎಂದು. ಅರ್ಜುನ ಸಂಬಂಧಗಳ ವ್ಯಾಮೋಹಕ್ಕೆ ಸಿಲುಕಿ ಯುದ್ಧ ಮಾಡಲು ನಿರಾಕರಿಸಿ ಶಸ್ತ್ರ ತ್ಯಜಿಸಲು ಮುಂದಾದಾಗ ಶ್ರೀಕೃಷ್ಣ ಪರಮಾತ್ಮ ಆತನ ಕರ್ತವ್ಯಗಳನ್ನು ನೆನಪಿಸುತ್ತಾನೆ. ಇದನ್ನು ನಾವು ಅರ್ಥ ಮಾಡಿಕೊಳ್ಳಬೇಕಷ್ಟೇ. ಕುಟುಂಬದಲ್ಲಿ ನೆಮ್ಮದಿ, ಸಾಮರಸ್ಯದ ಜೀವನ ಬೇಕು. ದೊಡ್ಡವರು ಚಿಕ್ಕವರೆನ್ನುವ ಗೌರವಭಾವನೆ ಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಸಮಸ್ಯೆಗಳು ಸಾಕಷ್ಟು ಇವೆ. ರೈತರ ಕಷ್ಟಗಳು ದೊಡ್ಡ ಪ್ರಮಾಣದಲ್ಲಿ ಇವೆ. ಈ ಬಗ್ಗೆ ಸರ್ಕಾರ ಗಮನ ಹರಿಸಲಿ ಎಂದು ಸಲಹೆ ನೀಡಿದರು.

TAGGED:BC NageshBhagavad Gitahd kumaraswamyschooltextbookಪಠ್ಯಪುಸ್ತಕಬಿಸಿ ನಾಗೇಶ್ಭಗವದ್ಗೀತೆಶಾಲೆಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

GBA
Bengaluru City

ಬೆಂಗಳೂರು ಅಭಿವೃದ್ಧಿಗೆ 20,213 ಕೋಟಿ ಬಜೆಟ್ – 5 ನಗರ ಪಾಲಿಕೆಗಳಿಗೂ ಪ್ರತ್ಯೇಕ ಆಯವ್ಯಯ ಮಂಡನೆ

Public TV
By Public TV
29 minutes ago
Mysuru Drugs
Crime

ಮೈಸೂರಲ್ಲಿ ಸಿಕ್ಕ 12 ಕೋಟಿ ಮೌಲ್ಯದ ಡ್ರಗ್ಸ್‌ಗೆ ಮುಂಬೈ ನಂಟು

Public TV
By Public TV
39 minutes ago
Hoskote Container Car Accident 1
Bengaluru City

ಕಂಟೇನರ್ ಲಾರಿ, ಕಾರು ನಡುವೆ ಭೀಕರ ಅಪಘಾತ – ಧಗಧಗನೆ ಹೊತ್ತಿ ಉರಿದ ಕಾರು

Public TV
By Public TV
55 minutes ago
Volodymyr Zelenskyy 2
Latest

ಇರಾನ್‌ ದಾಳಿಗೂ ಮುನ್ನ ರಷ್ಯಾ ಹಿಂದೂ ಮಹಾಸಾಗರದ ಮಿಲಿಟರಿ ಕೇಂದ್ರದ ಉಪಗ್ರಹ ಚಿತ್ರ ತೆಗೆದುಕೊಂಡಿತ್ತು: ಝೆಲೆನ್ಸ್ಕಿ

Public TV
By Public TV
58 minutes ago
Cicada Virus
Explainer

Explainer | ಅಮೆರಿಕದ 25ಕ್ಕೂ ಅಧಿಕ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿದ ಕೋವಿಡ್‌ ರೂಪಾಂತರಿ – ಸಿಕಾಡಾ ಎಷ್ಟು ಡೇಂಜರ್?‌ ಲಕ್ಷಣಗಳೇನು?

Public TV
By Public TV
1 hour ago
Anekal Family Suicide
Bengaluru City

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?