ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ಅಗತ್ಯತೆ ಇದೆ: ವಿಶ್ವೇಶ್ವರ ಹೆಗಡೆ ಕಾಗೇರಿ

Public TV
2 Min Read
SESSION kageri 1

ಬೆಂಗಳೂರು: ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ಅಗತ್ಯತೆ ಇದೆ ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟಿಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಭಗವದ್ಗೀತೆಯ ಮೂಲ ದಾಖಲೆ ನಮ್ಮಲ್ಲಿಲ್ಲ: ಕೇಂದ್ರ ಸಂಸ್ಕೃತಿ ಸಚಿವಾಲಯ

bhagavad gita

ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಚರಣ್ ಬ್ಯಾಂಕ್ ಶಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು ಎನ್ನುವಂತಹ ವಿಷಯದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆ, ಹಣವನ್ನು ಗಳಿಸುವ ಉದ್ದೇಶದ ಬ್ರಿಟಿಷ್‌ ಪದ್ಧತಿಯಾಗಿದೆ. ನನ್ನದೊಂದು ನಂಬಿಕೆ ಇದೆ. ಅದನ್ನು ಹೇಳಿದರೆ ತಪ್ಪಾಗಲಾರದು. ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಇದೆ ಎಂದು ಅನಿಸುತ್ತದೆ ಎಂದು ತಿಳಿಸಿದ್ದಾರೆ.

ಭಗವದ್ಗೀತೆಯಲ್ಲಿ ಜಾತಿ, ಉಪಜಾತಿ, ಆ ರಾಜ್ಯ, ಈ ಭಾಷೆ, ಆ ಗಡಿ, ಈ ಗಡಿ ಎನ್ನುವ ತಾರತಮ್ಯ ಇಲ್ಲ. ಯಾವ ಭೇದಭಾವ ಕೂಡ ಇಲ್ಲ. ಸೃಷ್ಟಿಯ ಸತ್ಯ ಏನಿದೆಯೋ ಅದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಸೃಷ್ಟಿಯ ಸತ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಹಾಗಾಗಿ ಅದನ್ನು ತಿಳಿದುಕೊಳ್ಳುವ ಶಿಕ್ಷಣ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆಯ ಶಿಕ್ಷಣವನ್ನು ನಾವು ಕಲಿಸಿದರೆ ತಪ್ಪಾಗಲಾರದು ಎನ್ನುವುದು ನನ್ನ ನಂಬಿಕೆ. ಅದನ್ನು ಕಲಿಸಬೇಕೆಂಬ ಆಗ್ರಹ ನನ್ನದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ

VISHESHWARA HEGDE KAGERI

ನಾನು ಶಿಕ್ಷಣ ಮಂತ್ರಿಯಾಗಿದ್ದಾಗ ಭಗವದ್ಗೀತಾ ಅಭಿಯಾನ ನಡೆಸಲಾಗಿತ್ತು. ಸ್ವರ್ಣವಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಂತಹ ಅಭಿಯಾನದಲ್ಲಿ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳು ಭಗವದ್ಗೀತೆ ಕಲಿಯುವ ಅವಕಾಶವನ್ನು ನಾನು ಶಿಕ್ಷಣ ಮಂತ್ರಿಯಾಗಿ ಮಾಡಿಕೊಟ್ಟಿದ್ದೇನೆ. ಇಂದು ಅದು ಕಡ್ಡಾಯವಾಗಿ ಶಿಕ್ಷಣದಲ್ಲಿ ಅಳವಡಿಕೆ ಆಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಅದು ಬರಲಿ ಎಂದು ಆಶಿಸೋಣ. ಭಗವದ್ಗೀತೆ ಶಿಕ್ಷಣದ ಭಾಗ ಆಗಬೇಕು. ಏಕೆಂದರೆ ಅದು ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುತ್ತದೆ. ಜೀವನದ ಸಾರ್ಥಕತೆಯನ್ನು ಅದು ನೀಡುತ್ತದೆ. ಹಣಗಳಿಸುವ ಶಿಕ್ಷಣ ವ್ಯವಸ್ಥೆಯಿಂದ ನಮ್ಮ ಜೀವನ ಸಾರ್ಥಕಗೊಳಿಸುವ ಶಿಕ್ಷಣ ವ್ಯವಸ್ಥೆಯ ಕಡೆಗೆ ಹೋಗಲು ಭಗವದ್ಗೀತೆಯಂತಹ ಶಿಕ್ಷಣ ಬೇಕು. ನಾವು ಹಣಗಳಿಸುವ ವ್ಯವಸ್ಥೆಯಿಂದ ಪರಿವರ್ತನೆ ತರಬೇಕು ಎನ್ನುವುದಾದರೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ನಮಗೆ ಅಗತ್ಯ. ಆಧ್ಯಾತ್ಮಿಕ ತಳಹದಿಯ ಶಿಕ್ಷಣ ಭಗವದ್ಗೀತೆಯಂತಹ ಶಿಕ್ಷಣದಲ್ಲಿ ಸಿಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *