ಬೀದರ್: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಹಿನ್ನೆಲೆ ಬೀದರ್ ನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷಬೇದ ಮರೆತು ಸಖತ್ ಸ್ಟೆಪ್ಸ್ ಹಾಕಿದ್ದಾರೆ.
ಲೊಕಸಭಾ ಚುನಾವಣಾ ಗುಂಗು ಮರೆತು ಅಭ್ಯರ್ಥಿಗಳು ಹಾಗೂ ರಾಜಕೀಯ ಮುಖಂಡರು ಖುಷಿಯಿಂದ ಹೆಜ್ಜೆ ಹಾಕಿದ್ದಾರೆ. ಪರಸ್ಪರ ಎದುರಾಳಿಯಾಗಿದ್ದರೂ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಹಾಗೂ ಬಿಜೆಪಿಯ ಭಗವಂತ ಖೂಬಾ ವೈರತ್ವವನ್ನು ಮರೆತು ಕುಣಿದು ಸಂತೋಷ ಪಟ್ಟಿದ್ದಾರೆ. ಅವರಿಗೆ ಸಚಿವ ಬಂಡೆಪ್ಪ ಕಾಶೆಂಪೂರ್, ಎಂಎಲ್‍ಸಿ ವಿಜಯ ಸಿಂಗ್, ಸೇರಿದಂತೆ ಅನೇಕ ರಾಜಕೀಯ ಮುಖಂಡರು ಸಾಥ್ ನೀಡಿದರು.
ಇಂದು ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಹಿನ್ನೆಲೆ ಬೀದರ್ ನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಎಲ್ಲಾ ಪಕ್ಷದ ನಾಯಕರು ಒಟ್ಟಾಗಿ ಕುಣಿದು ಲೋಕಸಭಾ ಚುನಾವಣಾ ಪ್ರಚಾರದಿಂದ ಕೊಂಚ ರಿಲೀಫ್ ಪಡೆದಿದ್ದಾರೆ.