ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ ‘ಭಗೀರಥ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ಮಡಿಕೇರಿ, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರಕ್ಕೆ 25 ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣವಾಗಿದೆ. ಸದ್ಯ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ನವೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ರಾಮ್ ಜನಾರ್ದನ್ ತಿಳಿಸಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ ಥ್ರಿಲ್ಲರ್ ಮಂಜು ಸಾಹಸ ಸಂಯೋಜನೆ ಮಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನಿರ್ದೇಶನ, ಅಕುಲ್ ನೃತ್ಯ ನಿರ್ದೇಶನ, ಸೂರಿ ಚಿತ್ತೂರು ಛಾಯಾಗ್ರಹಣ, ರವಿಚಂದ್ರನ್ ಸಂಕಲನ ಹಾಗೂ ಮೋಹನ್ ರಾಸು ಅವರ ಸಹ ನಿರ್ದೇಶನ “ಭಗೀರಥ” ಚಿತ್ರಕ್ಕಿದೆ.
ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಶ್ರೀನಿವಾಸಪ್ರಭು, ಬಾಲ ರಾಜವಾಡಿ, ನಯನ, ರವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]