ಬೀದರ್: ಯಾರು ಇಲ್ಲದ ವೇಳೆ ಮಸೀದಿ (Mosque) ಮೇಲೆ ಕಿಡಿಗೇಡಿಗಳು ಭಗವಾಧ್ವಜ (Bhagwa Dhwaj) ಹಾರಿಸಿ ಪರಾರಿಯಾದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರಾ ಕೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರ ವಲಯದ ಜಾಮೀಯಾ ಮಸೀದಿ (Jamia Masjid) ಮೇಲೆ ರಾತ್ರಿ ಭಗವಾಧ್ವಜ ಹಾರಿಸಿ ಕಿಡಿಗೇಡಿಗಳು ಪರಾರಿಯಾಗಿದ್ದು ಗ್ರಾಮದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ವಿಷಯ ತಿಳಿದು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಗ್ರಾಮಸ್ಥರ ಮನವೊಲಿಸಿ ಭಗವಾಧ್ವಜ ತೆಗೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ರಾಪಂ ಕಚೇರಿಯಲ್ಲಿ ಗ್ರಾಮಸ್ಥರೊಂದಿಗೆ ಶಾಂತಿ ಸಭೆ ಮಾಡಿದ ಸಿಪಿಐ ನ್ಯಾಮೇಗೌಡ ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುತ್ತೇವೆ. ಯಾರು ಅಶಾಂತಿಗೆ ಕಾರಣವಾಗಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಬಿಜೆಪಿ ಜೊತೆ ದೋಸ್ತಿ – ಜೆಡಿಎಸ್‌ನಲ್ಲಿ ಅಸಮಾಧಾನ ಸ್ಫೋಟ
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]