ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಒಬ್ಬ ಕುಡುಕ ಮತ್ತು ಅನಕ್ಷರಸ್ಥ ವ್ಯಕ್ತಿ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ವಾಗ್ದಾಳಿ ನಡೆಸಿದ್ದಾರೆ.
Advertisement
Advertisement
ಬುಧವಾರ ಬಟಿಂಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಗವಂತ್ ಮಾನ್ ಕುಡುಕ ಮತ್ತು ಅನಕ್ಷರಸ್ಥ ವ್ಯಕ್ತಿ. ಅವರು ಮೂರು ವರ್ಷಗಳ ಕಾಲ 12 ನೇ ತರಗತಿಯನ್ನು ಓದಿ ಪಾಸಾಗಿದ್ದಾರೆ. ಅಂತಹ ವ್ಯಕ್ತಿಗೆ ಯಾರಾದರೂ ಪಂಜಾಬ್‍ನ ಅಧಿಕಾರವನ್ನು ಹೇಗೆ ನೀಡಲು ಸಾಧ್ಯ ಎಂದು ಎಎಪಿಯನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಿ – ಉದ್ಯೋಗಿಗಳ ಜೊತೆ ಚಂದ್ರಶೇಖರ್ ಮಾತು
Advertisement
Advertisement
ಎಎಪಿ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಪಂಜಾಬ್ ಅನ್ನು ಆತನ ಕೈಗೆ ನೀಡಲು ಹೇಗೆ ನಿರ್ಧರಿಸಿದ್ದಾರೆ? ಎಂದು ಕೇಳಿದ್ದಾರೆ. ಬಟಿಂಡಾ ನಗರ ಕ್ಷೇತ್ರದ ಅಭ್ಯರ್ಥಿ ಮನ್‍ಪ್ರೀತ್ ಸಿಂಗ್ ಬಾದಲ್ ಪರವಾಗಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ರೋಡ್‍ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಿದರು. ಫೆಬ್ರವರಿ 20 ರಂದು ಪಂಜಾಬ್‍ನಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಫೇಸ್‌ಬುಕ್ ಉದ್ಯೋಗಿಗಳು ಇನ್ನು ಮುಂದೆ ಮೆಟಾಮೇಟ್ಸ್: ಜುಕರ್‌ಬರ್ಗ್