ನವದೆಹಲಿ: ಎಎಪಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್ ಮಾನ್ ಅವರನ್ನು ಘೋಷಿಸಿದೆ.
ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷ ಇಂದು ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು ಪಂಜಾಬ್‍ನ ಜನರು ತಮ್ಮ ಆದ್ಯತೆಯ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಸೂಚಿಸಲು ದೂರವಾಣಿ ಮಾರ್ಗಗಳನ್ನು ತೆರೆದಿತ್ತು. ಈ ಎಲ್ಲಾ ಕರೆಗಳನ್ನು ಆಲಿಸಿದ ನಂತರ ಎಎಪಿ ಈ ನಿರ್ಧಾರವನ್ನು ಪ್ರಕಟಿಸಿದೆ. ಇದನ್ನೂ ಓದಿ: 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?
Advertisement
Advertisement
ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಯಾವ ಪಕ್ಷದಿಂದ, ಯಾರು ಮುಖ್ಯಮಂತ್ರಿ ಅಭ್ಯರ್ಥಿ ಆಗಲಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿತ್ತು. ಹಲವಾರು ಬಾರಿ ಶೀಘ್ರದಲ್ಲೇ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದ ಎಎಪಿ ಈಗ ಕೊನೆಗೂ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ.
Advertisement
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವಾಟ್ಸಪ್, ಫೋನ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಶೇ. 93 ಕ್ಕಿಂತ ಹೆಚ್ಚು ಮತವನ್ನು ಭಗವಂತ್ ಮಾನ್ ಪಡೆದುಕೊಂಡಿದ್ದಾರೆ. 3 ರಷ್ಟು ಮತ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಹೆಸರಲ್ಲಿವೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
Advertisement
ಪಂಜಾಬ್ ಚುನಾವಣೆಯಲ್ಲಿ ಆಪ್ ಗೆಲ್ಲುವುದು ಸ್ಪಷ್ಟವಾಗಿದೆ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾದ ವ್ಯಕ್ತಿ ಪಂಜಾಬ್‍ನ ಮುಖ್ಯಮಂತ್ರಿ ಆಗುತ್ತಾರೆ. ಭಗವಂತ್ ಮಾನ್ ಅವರು ಪಂಜಾಬ್‍ನ ಸಂಗ್ರೂರ್ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಚುನಾಯಿತರಾಗಿದ್ದಾರೆ ಎಂದಿದ್ದಾರೆ.