ಕಲಬುರಗಿ: ಕಳೆದ ನಲವತ್ತು, ಐವತ್ತು ವರ್ಷಗಳಿಂದ ಬಿಜೆಪಿಗೆ ಕಲಬುರಗಿ ಮಹಾನಗರಪಾಲಿಕೆಯಲ್ಲಿ ಅಧಿಕಾರವಿರಲಿಲ್ಲ, ಇಷ್ಟು ಸುಧೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಲ್ಲ ವಾರ್ಡಗಳಲ್ಲಿ ಅಭಿವೃದ್ಧಿ ಮಾಡಿಲ್ಲ, ತಮಗೆ ಬೇಕಾದ ವಾರ್ಡಗಳಲ್ಲಿ ಮಾತ್ರ ಅಭಿವೃದ್ಧಿ ಮಾಡುವ ಮೂಲಕ ತಾರತಮ್ಯದ ನೀತಿ ಅನುಸರಿಸಿದ್ದಾರೆ ಎಂದು ಖೂಬಾ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ದಬಧಬಿ ಜಲಪಾತದಲ್ಲಿ ಈಜಲು ತೆರಳಿದ್ದ ಯುವಕ ಸಾವು
ಕಳೆದ ಹಲವಾರು ವರ್ಷಗಳಲ್ಲಿ ಮಹಾನಗರಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಇಲ್ಲಿ ಮತ ಬ್ಯಾಂಕ್ ರಾಜಕಾರಣ ನಡೆಯುತ್ತಿದೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತ ನಮ್ಮ ಸರ್ಕಾರ ಕಲಬುರಗಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿಯನ್ನು ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ ಎಂದು ತಿಳಿಸಿದರು.