ಬೀದರ್: ನಗರಸಭೆಯ ಎರಡು ವಾರ್ಡ್‌ಗಳಿಗೆ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ.
Advertisement
ಕೋರ್ಟ್ ತಡೆಯಾಜ್ಞೆ ತೆರವಾದ ಹಿನ್ನಲೆಯಲ್ಲಿ ಬೀದರ್ ನಗರದ 26 ಹಾಗೂ 32ನೇ ನಗರಸಭೆಯ ಎರಡು ವಾರ್ಡ್‌ಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯುತ್ತಿದೆ. ಸ್ಥಳೀಯ ಚುನಾವಣೆಯ ಅಬ್ಬರ ಪ್ರಚಾರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದನ್ನೂ ಓದಿ: ಭಾವಿ ಪತಿ ಜೊತೆಗೆ ತವರೂರಲ್ಲಿ ಶುಭಾ
Advertisement
Advertisement
ಇಂದು ಬಿಜೆಪಿ ಅಭ್ಯರ್ಥಿ ಸುಮಿತ್ರಾ ದಳವೆ ಪರ ಮಯತಯಾಚನೆ ಬಂದ ವೇಳೆ ಭಗವಂತ ಖೂಬಾ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ವಿಕೇಂಡ್ ಕರ್ಪ್ಯೂ ಜಾರಿಯಲ್ಲಿದ್ದರು ಗುಂಪು ಸೇರಿಸಿಕೊಂಡು ಮಾಸ್ಕ್ ಹಾಕದೆ ಹಾಗೂ ಸಾಮಾಜಿಕ ಅಂತರ ಕಾಪಾಡದೆ 32ನೇ ವಾರ್ಡ್ ನಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದು, ಎಲ್ಲರೂ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಕೊರೊನಾ ಮೂರನೇ ಅಲೆಗೆ ಆಹ್ವಾನ ನೀಡುತ್ತಿದ್ದಾರೆ.