ಬೆಂಗಳೂರು: ನಗರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ-ವಹಿವಾಟಿಗೆ ಮಧ್ಯರಾತ್ರಿ ಒಂದು ಗಂಟೆವರೆಗೆ ಅವಕಾಶ ಕೊಡಬೇಕು ಎಂಬ ಪ್ರಸ್ತಾವನೆ ಬಂದರೆ ಅದನ್ನು ಸರ್ಕಾರ ಪರಿಗಣಿಸಲಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು. ಮಹಾನಗರ ಪಾಲಿಕೆ ವ್ಯಾಪ್ತಿಯಂತೆ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ-ವಹಿವಾಟು ನಡೆಸಲು ರಾತ್ರಿ 1 ಗಂಟೆವರೆಗೂ ಅವಕಾಶ ಕೊಡಬೇಕು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ಟೂರಿಸಂಗೆ ಅನುಕೂಲ ಆಗಲು ವ್ಯಾಪಾರ-ವಹಿವಾಟು ನಡೆಸಲು ರಾತ್ರಿವರೆಗೂ ಅವಕಾಶ ಕೊಡಬೇಕು. ರಾತ್ರಿ ದೇವಸ್ಥಾನಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಬಾರದು. ರಾತ್ರಿ ನಡೆಯುವ ಯಕ್ಷಗಾನಕ್ಕೆ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: Bengaluru | ಬೇಸಿಗೆಯ ತಾಪಕ್ಕೆ ತಂಪೆರಿದ ವರುಣ – ಬೆಂಗಳೂರಿನ ಹಲವೆಡೆ ಮಳೆಯ ಸಿಂಚನ
ಪ್ರಶ್ನೆಗೆ ಉತ್ತರಿಸಿದ ಸಚಿವ ಭೈರತಿ ಸುರೇಶ್ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆವರೆಗೂ ವ್ಯಾಪಾರ-ವಹಿವಾಟು ಮಾಡಲು ಅವಕಾಶ ಸರ್ಕಾರ ನೀಡಿದೆ. ನಗರಸಭೆ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ಅವಧಿ 1 ಗಂಟೆ ವಿಸ್ತರಣೆ ಮಾಡಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಟೆಂಪಲ್ ಟೂರಿಸಂ, ಪ್ರವಾಸೋದ್ಯಮಕ್ಕೆ ಸಹಕಾರ ಆಗಲು ವ್ಯಾಪಾರ ವಹಿವಾಟು ಸಮಯ ವಿಸ್ತರಣೆ ಮಾಡುವ ಪ್ರಸ್ತಾಪ ಸರ್ಕಾರದ ಹಂತದಲ್ಲಿ ಇಲ್ಲ. ಒಂದು ವೇಳೆ ಜನಪ್ರತಿನಿಧಿಗಳು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ಸರ್ಕಾರ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಆಸ್ಪತ್ರೆಯ ಡ್ರೆಸ್ ರೂಮ್‍ನಲ್ಲಿ ಕ್ಯಾಮೆರಾ ಇರಿಸಿದ್ದ ಟ್ರೈನಿ ನರ್ಸ್ ಅರೆಸ್ಟ್!