ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶದ ರೀತಿಯಲ್ಲಿ ರಾಜಸ್ಥಾನದಲ್ಲೂ (Rajasthan) ಬಿಜೆಪಿ (BJP) ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ (Bhajan Lal Sharma) ಅವರನ್ನು ಆಯ್ಕೆ ಮಾಡಿದೆ.
ಇವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಾಗಿದ್ದು, ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಆಯ್ಕೆ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಗಾಗಿ ಹೊಸ ಮುಖಗಳನ್ನು ಬಿಜೆಪಿ ಹೈಕಮಾಂಡ್ ಮಾಡಿದಂತಿದೆ. ಈ ಮೂಲಕ ಛತ್ತೀಸ್‌ಗಢ, ಮಧ್ಯಪ್ರದೇಶ ಇದೀಗ ರಾಜಸ್ಥಾನದಲ್ಲಿಯೂ ಹೊಸ ಮುಖಕ್ಕೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇದನ್ನೂ ಓದಿ: 30 ದಿನಗಳ ಒಳಗಡೆ ಮನೆ ಖಾಲಿ ಮಾಡಿ: ಮೊಯಿತ್ರಾಗೆ ನೋಟಿಸ್
#WATCH | Rajasthan CM-designate Bhajanlal Sharma garlanded after BJP picks him for the CM post, in Jaipur pic.twitter.com/rcwibk9fDd
— ANI (@ANI) December 12, 2023
ಸಾಂಗನೇರ್ ಕ್ಷೇತ್ರದ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ಅಮಿತ್ ಶಾ ಆಪ್ತರಾಗಿದ್ದಾರೆ. ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಭಜನ್ ಲಾಲ್ ಶರ್ಮಾ ಬ್ರಾಹಣ ಸಮುದಾಯದವರಾಗಿದ್ದು, 48,000 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಪ್ರೇಮ್ ಚಂದ್ ಬೈರ್ವಾ ಹಾಗೂ ದಿಯಾ ಕುಮಾರಿ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಕರ್ನಾಟಕದ ರೈತರಿಗೆ ಪ್ರಧಾನಿ ಮೋದಿ ವಿಶೇಷ ಪ್ಯಾಕೇಜ್ ಘೋಷಿಸಬೇಕು – ಸುಮಲತಾ ಮನವಿ
ಬಾಬಾ ಬಾಲಕನಾಥ್, ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಜೈಪುರ ರಾಜಮನೆತನದ ದಿಯಾ ಕುಮಾರಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಮತ್ತು ಹಿರಿಯ ನಾಯಕ ಕಿರೋಡಿ ಲಾಲ್ ಮೀನಾ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಆದರೆ ಮುಖ್ಯಮಂತ್ರಿ ರೇಸ್‌ನಲ್ಲಿ ಎಲ್ಲರನ್ನೂ ಹಿಂದಿಕ್ಕಿ, ಭಜನ್ ಲಾಲ್ ಶರ್ಮಾ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್ ರಾವತ್ ವಿರುದ್ಧ ದೇಶದ್ರೋಹದ ಕೇಸ್