ಜೈಪುರ: ಸಂಗನೇರ್‌ನ ಬಿಜೆಪಿ ಶಾಸಕ ಭಜನ್‌ಲಾಲ್ ಶರ್ಮಾ (Bhajanlal Sharma) ರಾಜಸ್ಥಾನದ (Rajasthan) ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ದಿಯಾ ಕುಮಾರಿ (Diya Kumari) ಮತ್ತು ಪ್ರೇಮ್ ಚಂದ್ ಬೈರ್ವಾ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಇದನ್ನೂ ಓದಿ: ಸಂಸತ್ ಸ್ಮೋಕ್ ಬಾಂಬ್ ಕೇಸ್ – ಟಿಎಂಸಿ ಶಾಸಕನ ಜೊತೆ ಆರೋಪಿ – ಫೋಟೋ ಹರಿಬಿಟ್ಟ ಬಿಜೆಪಿ
Advertisement
Advertisement
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.
Advertisement
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಅರ್ಜುನ್ ರಾಮ್ ಮೇಘವಾಲ್ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಬದುಕುವ ಆಸೆ ಉಳಿದಿಲ್ಲ: ಲೈಂಗಿಕ ಕಿರುಕುಳಕ್ಕೆ ಬೇಸತ್ತು CJIಗೆ ಪತ್ರ ಬರೆದ ಯುಪಿ ನ್ಯಾಯಾಧೀಶೆ
Advertisement
ಭಜನ್‌ಲಾಲ್ ಶರ್ಮಾ ರಾಜಸ್ಥಾನದ ಪೂರ್ವ ಜಿಲ್ಲೆ ಭರತ್‌ಪುರದವರು. ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (RSS) ಬಲವಾದ ಬೆಂಬಲ ಹೊಂದಿದ್ದಾರೆಂದು ಪರಿಗಣಿಸಲಾಗಿದೆ. ಭಜನ್‌ಲಾಲ್ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಈಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ 1,45,162 ಮತಗಳನ್ನು ಪಡೆದು ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪುಷ್ಪೇಂದ್ರ ಭಾರದ್ವಾಜ್ ಅವರನ್ನು ಸೋಲಿಸಿದರು. ಭಾರದ್ವಾಜ್ 97,081 ಮತಗಳನ್ನು ಪಡೆದಿದ್ದರು.
ಪ್ರೇಮ್ ಚಂದ್ ಬೈರ್ವಾ ಅವರು ರಾಜಸ್ಥಾನದ ದುಡು ಕ್ಷೇತ್ರದ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. ಚುನಾವಣೆಯಲ್ಲಿ ಬೈರ್ವಾ ಅವರು ಕಾಂಗ್ರೆಸ್ ಅಭ್ಯರ್ಥಿ ಬಾಬುಲಾಲ್ ನಗರ್ ಅವರನ್ನು 35,743 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಜೈಪುರದ ಹಿಂದಿನ ರಾಜಮನೆತನದ ದಿಯಾ ಕುಮಾರಿ ಅವರು ಜೈಪುರದ ವಿದ್ಯಾಧರ್ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನ ಸೀತಾರಾಮ್ ಅಗರ್ವಾಲ್ ವಿರುದ್ಧ 71,368 ಮತಗಳ ಅಂತರದಿಂದ ಗೆದ್ದಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ 69 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.