ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚೆಕ್ ಮೇಲೆ ಚೆಕ್ ಕೊಡಲು ಆರಂಭಿಸಿದ್ದಾರೆ.
ಯಡಿಯೂರಪ್ಪ ಅಧ್ಯಕ್ಷರಾಗಿದ್ದಾಗ ತಲೆದಂಡವಾಗಿದ್ದ ಭಾನುಪ್ರಕಾಶ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ ಗುರುತಿಸಿಕೊಂಡಿದ್ದ ಭಾನುಪ್ರಕಾಶ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದರು.
Advertisement
Advertisement
ಯಡಿಯೂರಪ್ಪ ಅವರು ಅಧ್ಯಕ್ಷರಾದ ಬಳಿಕ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಅವರು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು ಯಾರದೋ ಮಾತು ಕೇಳಿಕೊಂಡು ಸರ್ವಾಧಿಕಾರಿಯಂತೆ ವರ್ತಿಸುವ ಮೂಲಕ ರಾಜಕೀಯ ಅಪ್ರಬುದ್ಧತೆ ಪ್ರದರ್ಶಿಸುತ್ತಿದ್ದಾರೆ ಎಂದು ಈ ಹಿಂದೆ ಶಿವಮೊಗ್ಗದಲ್ಲಿ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಇದನ್ನು ಓದಿ: ಆರ್‍ಎಸ್‍ಎಸ್ V/S ಯಡಿಯೂರಪ್ಪ: ಆಕ್ರೋಶಕ್ಕೆ ತಿರುಗಿದ ಬಿಜೆಪಿ ಭಿನ್ನಮತ
Advertisement
ಈ ಹಿಂದೆ ರಾಯಣ್ಣ ಬ್ರಿಗೇಡ್ ಗೆ ಬೆಂಬಲಿಸಿ ಬಿಎಸ್‍ವೈ ವಿರೋಧ ಕಟ್ಟಿಕೊಂಡಿದ್ದ ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ ಅವರಿಗೂ ಕಟೀಲ್ ಬಿಜೆಪಿ ಉಪಾಧ್ಯಕ್ಷ ಪಟ್ಟವನ್ನು ನೀಡಿದ್ದಾರೆ. ಬಿಎಸ್‍ವೈ ವಿರೋಧಿಗಳಿಗೆ ಕಟೀಲ್ ಮಣೆ ಹಾಕುತ್ತಿದ್ದು ಈಗ ಹಲವು ಚರ್ಚೆಗೆ ಗ್ರಾಸವಾಗುತ್ತಿದೆ.
Advertisement
ಬುಧವಾರವಷ್ಟೇ ಬಿಬಿಎಂಪಿ ಮೇಯರ್ ಆಯ್ಕೆಗೆ ಸಮಿತಿ ರಚಿಸಿಲ್ಲ ಎಂದು ಯಡಿಯೂರಪ್ಪ ನವರಿಗೆ ನಳೀನ್ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದರು. ಮೇಯರ್ ಆಯ್ಕೆ ಸಂಬಂಧ ಮುಖ್ಯಮಂತ್ರಿಗಳ ಸೂಚನೆಯಂತೆ ಸೋಮವಾರ ಎಸ್.ರಘು ನೇತೃತ್ವದಲ್ಲಿ ರಚನೆಯಾಗಿದ್ದ ಸಮಿತಿ ಎರಡು ಸಭೆ ನಡೆಸಿತ್ತು. ಈ ನಡುವೆ ಮೇಯರ್ ಆಯ್ಕೆ ಸಂಬಂಧ ಪಕ್ಷ ಯಾವುದೇ ಸಮಿತಿ ರಚನೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದರು.
ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಕೊಠಡಿಯಲ್ಲಿ ಎಸ್.ರಘು ಸಮಿತಿ ಸಭೆ ನಡೆಸಿ ಏಳು ಮಂದಿ ಮೇಯರ್ ಆಕಾಂಕ್ಷಿಗಳಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿತ್ತು. ಬುಧವಾರ ಸಹ ಸಮಿತಿ ಕಚೇರಿಯಲ್ಲಿ ಪಾಲಿಕೆ ಸದಸ್ಯರ ಅಭಿಪ್ರಾಯ ಆಲಿಸಿದೆ.