Districts

ಭಾರತ್ ಬಂದ್ – ಅಕ್ಕಮಹಾದೇವಿ ವಿವಿ ಪರೀಕ್ಷೆ ಮುಂದೂಡಿಕೆ

Published

on

Share this

ವಿಜಯಪುರ: ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘಟನಗಳು ಕರೆ ಕೊಟ್ಟಿರುವ ಭಾರತ್ ಬಂದ್ ಹಿನ್ನೆಲೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇಂದು ನಿಗದಿಯಾಗಿದ್ದ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಇಂದು ಅಕ್ಕಮಹಾದೇವಿ ವಿ.ವಿಯಲ್ಲಿ ಸ್ನಾತಕ/ಸ್ನಾತಕೋತ್ತರ ಹಾಗೂ ಬಿಎಡ್ ಕೋರ್ಸ್‍ಗಳ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ನಿಗದಿಯಾಗಿತ್ತು. ಭಾರತ್ ಬಂದ್ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಇಂದು ನಡೆಯಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ವಿವಿ ಮುಂದೂಡಿದೆ. ಇದನ್ನೂ ಓದಿ: ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ

ಬಿಎಡ್ ವಿದ್ಯಾರ್ಥಿಗಳಿಗೆ ಇಂದು ನಡೆಯಬೇಕಿದ್ದ ಪರೀಕ್ಷೆ ನಾಳೆ ನಡೆಸಲು ನಿರ್ಧಾರ ಮಾಡಲಾಗಿದೆ. ಸ್ನಾತಕ/ಸ್ನಾತಕೋತ್ತರ ವಿದ್ಯಾರ್ಥಿಗಳ ಮುಂದೂಡಿಕೆಯಾದ ಪರೀಕ್ಷೆಯ ದಿನಾಂಕ ನಂತರ ತಿಳಿಸಲಾಗುವುದು ಎಂದು ವಿವಿ ತಿಳಿಸಿದೆ. ಪರೀಕ್ಷೆ ಮುಂದೂಡಿಕೆ ಕುರಿತು ಅಕ್ಕಮಹಾದೇವಿ ವಿವಿ ಮೌಲ್ಯಮಾಪನ ವಿಭಾಗದ ಕುಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ – ಇಬ್ಬರು ಸಾವು 

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications