ಬೆಂಗಳೂರು: ರೈತರು ಕರೆ ನೀಡಿರುವ ಭಾರತ್ ಬಂದ್‍ಗೆ ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭವಾಗಿದೆ.
ದಾವಣಗೆರೆಯ ಜಯದೇವ ಸರ್ಕಲ್‍ನಲ್ಲಿ ರಸ್ತೆಗೆ ತರಕಾರಿ ಸುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ಹೇಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಹಾಸನದಲ್ಲಿ ಎಂದಿನಂತೆ ಅಂಗಡಿಗಳು ಮತ್ತು ಹೋಟೆಲ್ ಗಳು ತೆರೆದಿದ್ದವು. ಹೋರಾಟಗಾರು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮನವಿ ಮಾಡಿದ ಬಳಿಕ ಅಂಗಡಿ, ಹೋಟೆಲ್ ಮಾಲೀಕರು ಬಂದ್ ಮಾಡಿದ್ದಾರೆ. ಇದನ್ನೂ ಓದಿ: ಬಂದ್ ಠುಸ್ ಪಟಾಕಿ – ಬೆಂಗಳೂರಿನಲ್ಲಿ ಎಂದಿನಂತೆ ಸಾಗುತ್ತಿದೆ ಜನ ಜೀವನ
Advertisement
ಭಾರತ ಬಂದ್ ಬೆಂಬಲಿಸಿ ಯಾದಗಿರಿಯಲ್ಲಿ ವಿವಿಧ ಸಂಘಟನೆಯ ಸದಸ್ಯರು ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
Advertisement
ರಾಯಚೂರಿನಲ್ಲಿ ನಗರ ಕೇಂದ್ರ ಬಸ್ ನಿಲ್ದಾಣದ ಬಳಿ ಪ್ರತಿಭಟನಾಕಾರರು ರಸ್ತೆ ಬಂದ್ ಮಾಡಿ ಪ್ರತಿಭಟಿಸಿದ್ದಾರೆ. ಬಸ್ ಸಂಚಾರಕ್ಕೆ ರೈತರು ಅಡ್ಡಿ ಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಬೆಳ್ಳಂಬೆಳಗ್ಗೆ ರೈತರು ಪಂಜಿನ ಮೆರವಣಿಗೆ ನಡೆಸಿದ್ದಾರೆ. ಶಿಡ್ಲಘಟ್ಟ ವೃತ್ತದಿಂದ ಬಲಮುರಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ್ದಾರೆ.
ಕೋಲಾರ ತಾಲೂಕಿನ ವೇಮಗಲ್ ನಲ್ಲಿ ರಸ್ತೆಯ ಮಧ್ಯೆ ಟಯರ್ ಗೆ ಬೆಂಕಿ ಹಚ್ಚಿ ಪ್ರಗತಿಪರ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.