ದಾವಣಗೆರೆ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ಗರ್ಭಿಣಿಯೊಬ್ಬರು ಪರದಾಡಿದ್ದಾರೆ.
ದಾವಣಗೆರೆಯ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಸ್ ಗಾಗಿ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಗರ್ಭಿಣಿ, ಬಸ್ ಸಿಗದೇ ಬೆಂಚ್ ಮೇಲೆಯೇ ಮಲಗಿರುವ ದೃಶ್ಯ ಮನಕಲಕುವಂತಿತ್ತು.
- Advertisement -
- Advertisement -
ಚಿತ್ರದುರ್ಗದ ಹಿರಿಯೂರು ತಾಲೂಕಿನ ಅದಿವಾಲ ಗ್ರಾಮದ ನಿವಾಸಿ ಗರ್ಭಿಣಿ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಡಿಸ್ಚಾರ್ಜ್ ಆಗಿದ್ದು, ಬಸ್ ಗಾಗಿ ಕಾಯುತ್ತಿದ್ದರು. ಆದ್ರೆ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಖಾಸಗಿ ಬಸ್ ನಲ್ಲಿ ಪ್ರಯಾಣಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ದಿಕ್ಕು ತೋಚದ ಸ್ಥಿತಿಯಲ್ಲಿ ಸಂಬಂಧಿಕರಿದ್ದು, ಗರ್ಭಿಣಿ ನಿಲ್ದಾಣದಲ್ಲೇ ಬೆಂಚ್ ಮೇಲೆ ಮಲಗಿದ್ದಾರೆ. ಇದನ್ನೂ ಓದಿ: ಭಾರತ್ ಬಂದ್- ಪಬ್ಲಿಕ್ ಟಿವಿ ವಾಹನದಲ್ಲಿ ರೋಗಿ ಆಸ್ಪತ್ರೆಗೆ ರವಾನೆ
- Advertisement -
- Advertisement -
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv