12 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ

Advertisements

ನವದೆಹಲಿ: 12 ರಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ.

Advertisements

ದೇಶದಲ್ಲಿ ಓಮಿಕ್ರಾನ್ ಸೊಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಮೂರನೇ ಅಲೆ ಬರುವ ಸಾಧ್ಯತೆ ದಟ್ಟವಾಗಿದೆ. ಈ ಹಿಂದೆ ತಜ್ಞರು ಮೂರನೇ ಅಲೆ ಮಕ್ಕಳಿಗೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ತಿಳಿಸಿದ್ದರು. ಇದೀಗ ಮೂರನೇ ಅಲೆ ಪ್ರಾರಂಭದ ಹಂತದಲ್ಲೇ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿ ಸಿಹಿ ಸುದ್ದಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರ ಆರ್ಡರ್ ನೀಡದಿದ್ರೆ ಕೋವಿಶೀಲ್ಡ್ ಉತ್ಪಾದನೆ ಶೇ.50ರಷ್ಟು ಕಡಿತಕ್ಕೆ ನಿರ್ಧಾರ: ಆದಾರ್ ಪೂನಾವಾಲಾ

Advertisements

ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್‍ನ ಕೋವ್ಯಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು. ಐಸಿಎಂಆರ್(Indian Council of Medical Research) ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್ -19 ಲಸಿಕೆ ಆಗಿದೆ. 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ತಜ್ಞರ ತಂಡ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್

Advertisements

ಈಗಾಗಲೇ 18 ವರ್ಷ ಮೇಲ್ಪಟ್ಟವರು ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆ ಪಡೆಯುತ್ತಿದ್ದಾರೆ. ಆದರೆ ಈವರೆಗೆ ಮಕ್ಕಳಿಗೆ ಕೊರೊನಾ ಲಸಿಕೆಗೆ ಡಿಸಿಜಿಐ ಒಪ್ಪಿಗೆ ಸೂಚಿಸಿರಲಿಲ್ಲ ಇದೀಗ ಮಕ್ಕಳಿಗೂ ಕೂಡ ತುರ್ತು ಬಳಕೆಗೆ ಒಪ್ಪಿಗೆ ಸಿಕ್ಕಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ

Advertisements
Exit mobile version