ನವದೆಹಲಿ: ಕೋವಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಿದ ಹೈದರಾಬಾದ್‌ನ ಭಾರತ್ ಬಯೋಟೆಕ್‌ನ(Bharat Biotech) ಇಂಟ್ರಾನಾಸಲ್ ಕೋವಿಡ್ ಲಸಿಕೆಯ(Intranasal Covid Vaccine) ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್(Booster Dose) ಆಗಿ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲು ಸರ್ಕಾರ ಅನುಮೋದಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ತಿಳಿಸಿದ್ದಾರೆ.
Advertisement
Advertisement
ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ತೆಗೆದುಕೊಂಡವರು iNCOVACC ಮೂಗಿನ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ತೆಗೆದುಕೊಳ್ಳಬಹುದು. ಸೂಜಿ ರಹಿತವಾಗಿರುವ ಈ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. ಇದನ್ನೂ ಓದಿ: ಕೊರೊನಾ ಆತಂಕ, ಖಾಸಗಿ ಆಸ್ಪತ್ರೆಗಳು ಆ್ಯಕ್ಟಿವ್ – ಕಳೆದ ಬಾರಿಯ ಬಿಲ್ ಕ್ಲಿಯರ್ ಮಾಡಲು ಸರ್ಕಾರಕ್ಕೆ ಮನವಿ
Advertisement
Advertisement
ಶುಕ್ರವಾರ ಸಂಜೆ ಕೋ-ವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಇದನ್ನು ಪರಿಚಯಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಎರಡು-ಡ್ರಾಪ್ ಲಸಿಕೆಯನ್ನು ಹಾಕಲಾಗುತ್ತದೆ. ಒಂದು ಲಸಿಕೆಯನ್ನು ಪಡೆದ 4 ವಾರಗಳ ಬಳಿಕ ಇನ್ನೊಂದು ಲಸಿಕೆಯನ್ನು ಹಾಕಿಸಿಕೊಳ್ಳಬೇಕಾಗುತ್ತದೆ.
ನವೆಂಬರ್‌ನಲ್ಲಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್‌ನಂತೆ iNCOVACC ಲಸಿಕೆ ನೀಡಬಹುದು ಎಂದು ಅನುಮೋದನೆ ನೀಡಿತ್ತು.