ಬೆಂಗಳೂರು: ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ (Bharath Brand) ಅಕ್ಕಿ ಗ್ರಾಹಕರಿಗೆ ಆನ್‌ಲೈನ್‌ಲೂ (Online) ಸಹ ಸಿಗಲ್ಲಿದ್ದು, ನಗರದಲ್ಲಿಯೂ ಅಕ್ಕಿ ಸಿಗಲಿದೆ
ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ತಂದತಹ ಭಾರತ್ ಅಟ್ಟಾ ಹಾಗೂ ಕಡಲೆ ಬೇಳೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ಪ್ರಿತಿಕ್ರಿಯೆ ಬಂದಿತ್ತು. ನಗರದಲ್ಲಿ 2,81,572 ಕೆ.ಜಿ ಭಾರತ್ ದಾಲ್ ಮತ್ತು 1,22,190 ಕೆ.ಜಿ ಗೋಧಿ ವ್ಯಾಪಾರವಾಗಿತ್ತು. ಇದನ್ನೂ ಓದಿ: ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ
Advertisement
Advertisement
ಇದೀಗ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಅಕ್ಕಿಯನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಮೂಲಕ ಮಾರಾಟ ಮಾಡಲು ಪ್ಲಾನ್ ಮಾಡಿದೆ. ಈ ಅಕ್ಕಿಯ ವಿತರಣೆ ಮಂಗಳವಾರ (ಫೆ.6) ಆರಂಭವಾಗುವ ಸಾಧ್ಯತೆಯಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ.ಇದನ್ನೂ ಓದಿ: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಾರೆ: ಸಿದ್ದರಾಮಯ್ಯ
Advertisement
Advertisement
ಪ್ರಮುಕವಾಗಿ ಭಾರತ್ ಬ್ರಾಂಡ್‌ನ ಅಕ್ಕಿ ಅಮೇಜಾನ್, ಫ್ಲಿಪ್ ಕಾರ್ಟ್ ನಂತಹ ಆನ್‌ಲೈನ್ ಶಾಪಿಂಗ್ ಆಪ್ಲಿಕೇಶನಲ್ಲೂ ಸಹ ಖರೀದಿಸಬಹುದು. ಇದರಿಂದ ಜನ ಸಾಮಾನ್ಯರಿಗೆ ಇನಷ್ಟು ಸುಲಭವಾಗಲಿದೆ. ಇದನ್ನೂ ಓದಿ:KSRTCಗೆ 800 ʻಅಶ್ವಮೇಧʼ ಕ್ಲಾಸಿಕ್ ಬಸ್‌ಗಳ ಬಲ – 100 ಬಸ್‌ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ
ನಗರದ ಯಾವ ಪ್ರಮುಖ ಪ್ರದೇಶಗಳಲ್ಲಿ ಅಕ್ಕಿ ಸಿಗಲ್ಲಿದೆ ಎಂಬುದರ ಪಟ್ಟಿ ಹೀಗಿದೆ.
ಬಸವೇಶ್ವರ ನಗರ, ದೀಪಾಂಜಲಿ ನಗರ, ಮಹಾಕ್ಷ್ಮಿ ಲೇಔಟ್, ಗಾಯತ್ರಿ ನಗರ, ನಾಗಸಂದ್ರ, ಅಬ್ಬಿಗೆರೆ, ಚಿಕ್ಕಬಣ್ಣಾವರ, ಥಣಿಸಂದ್ರ, ಹೆಸರಘಟ್ಟ, ಯಲಹಂಕ, ಮಾಗಡಿ ರೋಡ್, ಕೊಡಿಗೆಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಜಕ್ಕೂರು, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಜೆ.ಸಿ. ನಗರ, ಡೈರಿ ಸರ್ಕಲ್, ಕೊಡಿಗೆಹಳ್ಳಿ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವ್ಯಾನ್ ಮೂಲಕ ಅಕ್ಕಿ ಪೂರೈಸಿ ಮನೆ ಮನೆಗೆ ತಲುಪಿಸಲಾಗುತ್ತೆ. ಇದನ್ನೂ ಓದಿ:ಪತಿಯೊಂದಿಗೆ ಅಕ್ರಮ ಸಂಬಂಧ – ಗೆಳತಿಯ ಮನೆಗೆ ನುಗ್ಗಿ ಪತ್ನಿಯಿಂದ ದಾಂಧಲೆ