ತಿರುವನಂತಪುರಂ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಆರಂಭಿಸಿರುವ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) 2,000 ರೂ. ದೇಣಿಗೆ ನೀಡುವಂತೆ ತರಕಾರಿ ವ್ಯಾಪಾರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾರ್ಯಕರ್ತರನ್ನು ಅಮಾನತುಗೊಳಿಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಗೆ ದೇಣಿಗೆ ಸಂಗ್ರಹಿಸುತ್ತಿದ್ದರು. ಈ ವೇಳೆ ಕೊಲ್ಲಂನ (Kollam) ತರಕಾರಿ ಅಂಡಿಯೊಂದಕ್ಕೆ ತೆರಳಿ ಅಂಗಡಿ ಮಾಲೀಕನೊಂದಿಗೆ 2,000 ರೂ. ದೇಣಿಗೆ ನೀಡುವಂತೆ ಕೇಳಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ನಾನು 500 ರೂ. ಕೊಡುವುದಾಗಿ ತಿಳಿಸಿದ್ದಾರೆ. ಆ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮಾಲೀಕನಿಗೆ ದಮ್ಕಿ ಹಾಕಿ ಬೆದರಿಕೆ ಹಾಕಿರುವುದಾಗಿ ದೂರು ದಾಖಲಾಗಿತ್ತು. ಆ ಬಳಿಕ ಘಟನೆ ಕುರಿತಾಗಿ ಕಾಂಗ್ರೆಸ್ ಕ್ರಮಕ್ಕೆ ಮುಂದಾಗಿದೆ. ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಇವರು ನಮ್ಮ ಸಿದ್ಧಾಂತದ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇಂತಹ ನಡವಳಿಕೆಯನ್ನು ಪಕ್ಷ ಸಹಿಸಿಕೊಳ್ಳುವುದಿಲ್ಲ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕರನ್ (K. Sudhakaran) ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ದೇಣಿಗೆಯಾಗಿ 2,000 ರೂ. ಕೊಡದ ತರಕಾರಿ ವ್ಯಾಪಾರಿಗೆ ಬೆದರಿಕೆ
Three party workers involved in an unacceptable incident in Kollam have been suspended with immediate effect. They do not represent our ideology and such behaviour is inexcusable. The party is crowdfunding small donations voluntarily unlike others who get corporate donations.
— K Sudhakaran (@SudhakaranINC) September 16, 2022
ಏನಿದು ಘಟನೆ?
ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಗೆ ದೇಣಿಗೆ ಸಂಗ್ರಹಿಸುತ್ತಿದ್ದರು. ಈ ವೇಳೆ ಕೊಲ್ಲಂನ ತರಕಾರಿ ಅಂಡಿಯೊಂದಕ್ಕೆ ತೆರಳಿ ಅಂಗಡಿ ಮಾಲೀಕನೊಂದಿಗೆ 2,000 ರೂ. ದೇಣಿಗೆ ನೀಡುವಂತೆ ಕೇಳಿದ್ದಾರೆ. ಅಂಗಡಿ ಮಾಲೀಕ ನಾನು 500 ರೂ. ಕೊಡುವುದಾಗಿ ತಿಳಿಸಿದ್ದಾನೆ. ಈ ವೇಳೆ ಅಂಗಡಿ ಮಾಲೀಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಅಂಗಡಿಯ ತೂಕದ ಯಂತ್ರಕ್ಕೆ ಹಾನಿ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದರಲ್ಲಿ ವರದಿಯಾಗಿದೆ.
ಅಲ್ಲದೆ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ದೃಶ್ಯಾವಳಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮಾಲೀಕರ ಬಳಿ ಬಂದು ದೇಣಿಯಾಗಿ 2,000 ರೂ. ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಅಂಗಡಿ ಮಾಲೀಕರು ಒಪ್ಪದೆ ತಾವು 500 ರೂ. ಕೊಡುವುದಾಗಿ ತಿಳಿಸಿದ್ದಾರೆ. ಬಳಿಕ ಜಗಳ ಆರಂಭಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಏರು ಧ್ವನಿಯಲ್ಲಿ ಅಂಗಡಿ ಮಾಲೀಕನಿಗೆ ದಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಶಸ್ತ್ರಾಸ್ತ್ರಗಳನ್ನು ತ್ಯಜಿಸಿ – ಉಗ್ರರಿಗೆ ಗುಲಾಂ ನಬಿ ಆಜಾದ್ ಮನವಿ
ಘಟನೆಯ ಬಳಿಕ ಅಂಗಡಿ ಮಾಲೀಕ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಇನ್ನೊಂದು ಪ್ರತಿದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗ್ಯಾಂಬ್ಲಿಂಗ್ ಗೇಮ್‍ಗಳ ನಿಷೇಧ – ಗೇಮಿಂಗ್ ಕಂಪನಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್
ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದ್ದು, ಯಾತ್ರೆಯು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯು 3,500 ಕಿ.ಮೀ ದೂರವನ್ನು ಕ್ರಮಿಸುತ್ತಿದ್ದು 12 ರಾಜ್ಯಗಳನ್ನು ಹಾದುಹೋಗಲಿದೆ.