ಮಂಡ್ಯ: ಕಾಂಗ್ರೆಸ್ (Congress) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಕರ್ನಾಟಕದಲ್ಲಿ ಇಂದು 6ನೇ ದಿನದಲ್ಲಿದ್ದು, ಅದ್ದೂರಿಯಾಗಿ ಸಾಗುತ್ತಿದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ (Rahul Gandh) ಅವರು ಯಾತ್ರೆಯ ವೇಳೆ ಅಲ್ಲಲ್ಲಿ ಸಣ್ಣ ಪುಟ್ಟ ಕೆಲಸಗಳಿಂದ ಗಮನ ಸೆಳೆಯುತ್ತಲೇ ಇದ್ದಾರೆ. ಇಂದು ರಾಗಾ ಮಹಿಳೆಯೊಬ್ಬರಿಗೆ (Woman) ಮಾಸ್ಕ್ (Mask) ತೊಡಿಸಿ ಸುದ್ದಿಯಾಗಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಮಂಡ್ಯ (Mandya) ಜಿಲ್ಲೆಯ ನಾಗಮಂಗಲದ ಬಲ್ಲೇನಹಳ್ಳಿ ಗೇಟ್‌ನಿಂದ ಇಂದು ಪಾದಯಾತ್ರೆ ಪ್ರಾರಂಭವಾಗಿದೆ. ಈ ವೇಳೆ ರಾಹುಲ್ ಗಾಂಧಿಯನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ಬಳಿಕ ರಾಗಾ ಪುಟಾಣಿ ಮಕ್ಕಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಆರ್‌ಬಿಐನಿಂದ ಶೀಘ್ರದಲ್ಲೇ ಪ್ರಾಯೋಗಿಕವಾಗಿ ಡಿಜಿಟಲ್ ಕರೆನ್ಸಿ ಬಿಡುಗಡೆ
Advertisement
Advertisement
ಇದೇ ವೇಳೆ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು ರಾಹುಲ್ ಗಾಂಧಿ ಕಡೆಗೆ ಓಡೋಡಿ ಬಂದಿದ್ದಾರೆ. ರಾಹುಲ್ ಗಾಂಧಿ ಅವರ ಕೈ ಮುಟ್ಟಿ ನಮಸ್ಕಾರ ಮಾಡಿದ ಬಳಿಕ ಮಹಿಳೆ ತಮ್ಮ ಮಾಸ್ಕ್ ಅನ್ನು ಸರಿಯಾಗಿ ಹಾಕಿಕೊಳ್ಳಲು ಪ್ರಯತ್ನಿಸಿದ್ದಾರೆ. ಆಗ ರಾಹುಲ್ ಗಾಂಧಿ ತಾವೇ ಆ ಮಹಿಳೆಗೆ ಮಾಸ್ಕ್ ಅನ್ನು ಸರಿಯಾಗಿ ಧರಿಸಲು ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್
Advertisement
Advertisement
ಇಂದು ಸಂಜೆ ರಾಹುಲ್ ಗಾಂಧಿ ಅವರು ಅಂಚೆಬೂನಹಳ್ಳಿಯಿಂದ ಬೆಳ್ಳೂರಿಗೆ ಬಂದು ಬಳಿಕ ಆದಿಚುಂಚನಗಿರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.