ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಳ್ಳಲು ರಾಹುಲ್ ಗಾಂಧಿ (Rahul Gandhi) ಜೊತೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ.
ಇಂದು ಮೈಸೂರಿಗೆ ಆಗಮಿಸುತ್ತಿರುವ ಸೋನಿಯಾ ಗಾಂಧಿ ಅವರು ವಸ್ತು ಪ್ರದರ್ಶನಾ ಮೈದಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ಮಗನ ಜೊತೆ ಚರ್ಚೆ ನಡೆಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ ಬರಲಿದ್ದಾರೆ. ಇದನ್ನೂ ಓದಿ: 29 ವರ್ಷಗಳ ನಂತ್ರ ವೈಷಮ್ಯ ಶಮನ – ವೀರಶೈವ, ದಲಿತರೊಂದಿಗೆ ರಾಹುಲ್ ಸಹಭೋಜನ
ಸೋನಿಯಾಗಾಂಧಿ ಅವರು ಸೋಮವಾರದ ಯಾತ್ರೆ ಮುಗಿಸಿ ಹೆಲಿಕಾಪ್ಟರ್‌ನಲ್ಲಿ ಮಡಿಕೇರಿಗೆ (Madikeri) ಪ್ರಯಾಣಿಸಲಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ (Vidhan Sabha Election) ಬೆರಳಣಿಕೆ ತಿಂಗಳು ಉಳಿದಿದೆ. ಈ ಸಮಯದಲ್ಲಿ ಸೋನಿಯಾ ಗಾಂಧಿ ಅವರ ಆಗಮನದಿಂದ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಲಾಭವಾಗಲಿದೆ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಇದನ್ನೂ ಓದಿ: ಟಿಪ್ಪು ಹಿಂದೂಗಳ ರಕ್ತ ಹರಿಸಿದ ನೆಲದಿಂದಲೇ ರಾಹುಲ್ ಯಾತ್ರೆ – ಕಾಂಗ್ರೆಸ್‌ಗೆ ರಾಹುಕಾಲ ಎಂದ BJP
ಬಿಜೆಪಿ ನೀತಿಗಳು, ಆಡಳಿತ ವೈಖರಿ, ಸಂಘರ್ಷದ ವಿರುದ್ಧ ಕಾಂಗ್ರೆಸ್ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಸೆ.30 ರಂದು ಗುಂಡ್ಲುಪೇಟೆ ಮೂಲಕ ಆರಂಭವಾಗಿದ್ದು, ಕೇರಳದ ವೈನಾಡು (ರಾಹುಲ್ ಗಾಂಧಿ ಪ್ರತಿನಿಧಿಸುವ ಸಂಸತ್ ಕ್ಷೇತ್ರ) ಮೂಲಕ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪಿದ ಭಾರತ್ ಜೋಡೋ ಯಾತ್ರೆ, ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ, 510 ಕಿಮೀ ಕೈಪಡೆ ಪಾದಯಾತ್ರೆ ನಡೆಸಲಿದೆ.