ಪಿ.ವಿ ನರಸಿಂಹ ರಾವ್ ಸೇರಿ ಐವರಿಗೆ `ಭಾರತ ರತ್ನ’

Public TV
1 Min Read
Bharat Ratna Droupadi Murmu

– ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪ್ರದಾನ

ನವದೆಹಲಿ: ಸಮಾಜವಾದಿ ನಾಯಕ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ (P.V Narasimha Rao), ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು (Bharat Ratna) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರದಾನ ಮಾಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನರಸಿಂಹರಾವ್ ಅವರ ಪುತ್ರ ಪಿ.ವಿ ಪ್ರಭಾಕರ್ ರಾವ್ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಸಿಂಗ್, ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್‍ನಾಥ್ ಠಾಕೂರ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

5ನೇ ಪ್ರಶಸ್ತಿ ಪುರಸ್ಕೃತರಾದ ಎಲ್.ಕೆ ಅಡ್ವಾಣಿ (L.K Advani) ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಭಾನುವಾರ ಅವರ ನಿವಾಸದಲ್ಲೇ ಅವರಿಗೆ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

Share This Article