ನವದೆಹಲಿ: ಉಪಚುನಾವಣೆ (By Election) ಟಿಕೆಟ್ ಘೋಷಣೆ ವಿಚಾರದಲ್ಲಿ ಬಿಜೆಪಿ (BJP) ಮುಂದಿದೆ. ಮೂರು ಕ್ಷೇತ್ರಗಳ ಪೈಕಿ ಇಂದು ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಶಿಗ್ಗಾಂವಿಯಲ್ಲಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ (Bharat Bommai), ಬಳ್ಳಾರಿಯ ಸಂಡೂರಿಗೆ ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು (Bangaru Hanumanthu) ಅವರಿಗೆ ಟಿಕೆಟ್ ನೀಡಿದೆ.
ಚನ್ನಪಟ್ಟಣದಲ್ಲಿ ಎನ್‌ಡಿಎ (NDA) ಅಭ್ಯರ್ಥಿ ಇನ್ನೂ ಘೋಷಣೆಯಾಗದ ಕಾರಣ ಅಭ್ಯರ್ಥಿ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ರಾಜ್ಯ ಘಟಕದ ಪಟ್ಟಿ ಬರುವ ಮುನ್ನವೇ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬೆಲ್ಲದ್ ಸೇರಿದಂತೆ ಕೆಲ ಬಿಜೆಪಿ ನಾಯಕರು ಬೊಮ್ಮಾಯಿ ಪುತ್ರನ ಪರ ಬ್ಯಾಟಿಂಗ್ ಮಾಡಿದ್ದರು.
Advertisement
ಬಂಗಾರು ಹನುಮಂತು ಅವರು ಜನಾರ್ದನ ರೆಡ್ಡಿ ಆಪ್ತರಾಗಿದ್ದಾರೆ. ಟಿಕೆಟ್ ರೇಸ್‌ನಲ್ಲಿ ಬಂಗಾರು ಹನುಮಂತು ಮತ್ತು ಕೆ ಎಸ್ ದಿವಾಕರ್ ಅವರ ಹೆಸರಿತ್ತು. ಕಳೆದ ಚುನಾವಣೆಯಲ್ಲಿ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧಿಸಿ ದಿವಾಕರ್ ಪರಾಭವಗೊಂಡಿದ್ದರು.
Advertisement
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ.
Advertisement
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. 2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Advertisement
ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ.