ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ 10 ವರ್ಷ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ ಎಂದು ಭಾರತೀಯ ಕಿಸಾನ್ ಯುನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಪಾಣಿಪತ್ ನಲ್ಲಿ ನಡೆದ ಮಹಾಪಂಚಾಯತ್ ನಲ್ಲಿ ಮಾತನಾಡಿದ ಅವರು, ಕಳೆದ 10 ತಿಂಗಳಿನಿಂದ ಮನೆಯನ್ನು ತೊರೆದು ಪ್ರತಿಭಟನೆ ನಡೆಸುತ್ತಿರುವ ರೈತರು 10 ವರ್ಷಗಳ ಕಾಲ ಪ್ರತಿಭಟನೆಗೆ ಸಿದ್ಧರಿದ್ದಾರೆ ಎಂದಿದ್ದಾರೆ.
Advertisement
Advertisement
ಈಗಿನ ಸರ್ಕಾರ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯದಿದ್ದರೆ ಮುಂದೆ ಬರಲಿರುವ ಸರ್ಕಾರ ಹಿಂದಕ್ಕೆ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ರೈತರಿಂದ ವಿನೂತನ ಪ್ರತಿಭಟನೆ
Advertisement
ಯಾವುದೇ ಕಾರಣಕ್ಕೂ ನಾವು ಈ ಕಾಯ್ದೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರತಿಭಟನೆ ವೇಳೆ ಡಿಸಿಪಿ ಮೇಲೆ ಕಾರು ಹತ್ತಿಸಲು ಯತ್ನ
Advertisement
ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.