ಬೆಳಗಾವಿ: 2 ವರ್ಷಗಳ ಬಳಿಕ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಇಂದು ಭಕ್ತರು ಭಾರತ ಹುಣ್ಣಿಮೆ ಸಂಭ್ರಮಾಚರಣೆ ಮಾಡಲಿದ್ದಾರೆ.
ಜಿಲ್ಲೆಯ ಸವದತ್ತಿ ಹೊರವಲಯದಲ್ಲಿರುವ ಸುಪ್ರಸಿದ್ಧ ದೇವಸ್ಥಾನ ಇದಾಗಿದ್ದು, ಕೋವಿಡ್ ಹಿನ್ನೆಲೆ ದೇವಸ್ಥಾನವು 2 ವರ್ಷಗಳಿಂದ ಬಂದ್ ಆಗಿತ್ತು. ಭಕ್ತರ ದಂಡೇ ದೇವಸ್ಥಾನಕ್ಕೆ ಹರಿದು ಬರುತ್ತಿದ್ದು, ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿ ವಿವಿಧೆಡೆಯಿಂದ ಆಗಮಿಸುತ್ತಿದ್ದಾರೆ. ಭಾರತ ಹುಣ್ಣಿಮೆ ನಿಮಿತ್ಯ ರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ಬೃಹತ್ ಜಾತ್ರೆ ನಡೆಯಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ನಿರ್ಮಾಣವಾಗ್ತಿದೆ ಐಫೆಲ್ ಟವರ್‍ಗಿಂತ ಎತ್ತರದ ಬ್ರಿಡ್ಜ್
Advertisement
Advertisement
ಇಂದು ಸುಮಾರು 10 ರಿಂದ 15 ಲಕ್ಷ ಭಕ್ತರು ಸೇರುವ ನಿರೀಕ್ಷೆಯಿದೆ. ಚಕ್ಕಡಿ, ಕಾರು, ವಿಶೇಷ ಬಸ್‍ಗಳಲ್ಲಿ ತಂಡೋಪತಂಡವಾಗಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರ ದಂಡು ಹರಿದುಬರುತ್ತಿದೆ. ಯಲ್ಲಮ್ಮಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ, ನೂಲಿನ ಗಿರಣಿ ಮಾರ್ಗದಲ್ಲಿ ಬ್ಯಾರಿಕೇಡ್‍ಗಳ ಅಳವಡಿಕೆ ಮಾಡಲಾಗಿದೆ. ಗುಡ್ಡದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಗುಡ್ಡದಲ್ಲಿ 52 ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್
Advertisement
Advertisement
ಭಕ್ತರಿಗೆ ಶುದ್ಧ ಕುಡಿಯುವ ನೀರು ಸೇರಿ ಮೂಲಸೌಕರ್ಯಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಉಳ್ಳಾಗಡ್ಡಿ ಮಾಹಿತಿ ನೀಡಿದ್ದಾರೆ.