ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್ ಹೆಸರಿನ ಪ್ರಸ್ತಾಪ ಕೇಳಿ ಬಂದಿದ್ದು ಚರ್ಚೆಗೆ ಕಾರಣವಾಗಿದೆ.
ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡುವ ಪ್ರಸ್ತಾಪ ತೀವ್ರ ಚರ್ಚೆಗೆ ಕಾರಣವಾಗಿದೆ.
Advertisement
Advertisement
ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಶಾಸಕ ಭರತ್ ಶೆಟ್ಟಿ ಮಾತನಾಡಿ, ಹಿಂದೂ ಸಂಘಟನೆಗಳು, ಸ್ಥಳೀಯರು ಸಾವರ್ಕರ್ ಹೆಸರಿಡಲು ಮನವಿ ಸಲ್ಲಿಸಿದ್ದರು. ಒಂಬತ್ತು ತಿಂಗಳ ಹಿಂದೆ ಈ ಪ್ರಕ್ರಿಯೆ ಶುರು ಆಗಿದೆ. ಸ್ವಾತಂತ್ರ್ಯ ಸೇನಾನಿ ವೀರಸಾವರ್ಕರ್ ವಿರುದ್ಧ ಯಾಕೆ ಈ ಮನಸ್ಥಿತಿಯಲ್ಲಿದ್ದಾರೆ ಗೊತ್ತಿಲ್ಲ. ಸಂಸತ್ತಿನ ಒಳಗಡೆ ಸಾವರ್ಕರ್ ಫೋಟೋ ಇರುವಾಗ ವಿರೋಧ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 100 ಲೋನ್ ಆ್ಯಪ್‍ಗಳಿಂದ 500 ಕೋಟಿ ರೂ. ವ್ಯವಹಾರ – ಗ್ರಾಹಕರ ಮಾಹಿತಿ ಚೀನಾಗೆ ರವಾನಿಸಿದ ಗ್ಯಾಂಗ್ ಅರೆಸ್ಟ್
Advertisement
Advertisement
ವೋಟ್ ಬ್ಯಾಂಕ್ ರಾಜಕೀಯಕ್ಕೆ ಸಾವರ್ಕರ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಹಿಂದೂ, ಮುಸ್ಲಿಮ್ ಎಂದು ಹೇಳಿಕೊಂಡು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ವಿರೋಧ ವ್ಯಕ್ತಪಡಿಸುವವರು ಒಮ್ಮೆ ಇತಿಹಾಸ ಓದಿಕೊಂಡು ಬರಲಿ. ಯಾರು ಯಾವುದೇ ಅಡೆತಡೆ ಮಾಡಿದರೂ ಸಾವರ್ಕರ್ ಹೆಸರು ಇಟ್ಟೇ ಇಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದೊಂದಿಗಿನ ಶಾಶ್ವತ ಶಾಂತಿಗೆ ಯುದ್ಧವೊಂದೇ ಆಯ್ಕೆಯಾಗಿಲ್ಲ: ಪಾಕ್ ಪ್ರಧಾನಿ