ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಮನೆಯಿಂದ ರೆಬಲ್ ಸ್ಟಾರ್ ಅಂಬರೀಶ್ ಅವರ ಕುಟುಂಬದವರಿಗೆ ಊಟ ಕಳುಹಿಸಲಾಗಿದೆ.
ಸೋಮವಾರ ಅಂಬರೀಶ್ ಅವರ ಅಂತ್ಯಕ್ರಿಯೆ ಆಗಿದ್ದು, ಇಂದು ಮನೆಯಲ್ಲಿ ಯಾರೂ ಅಡುಗೆ ಮಾಡುವುದಿಲ್ಲ. ಇದನ್ನು ತಿಳಿದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ತಮ್ಮ ಪಿಎಯಿಂದ ಅಂಬರೀಶ್ ಮನೆಯವರಿಗೆ ಊಟ ಕಳುಹಿಸಿಕೊಟ್ಟಿದ್ದಾರೆ.
Advertisement
Advertisement
ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರು ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರ ಕುಟುಂಬದವರು ತುಂಬಾ ಆತ್ಮೀಯರಾಗಿದ್ದಾರೆ. ಈ ಸಮಯದಲ್ಲಿ ಸುಮಲತಾ ಹಾಗೂ ಅಭಿಷೇಕ್ ಊಟ ಮಾಡುವುದಿಲ್ಲ ಎಂಬುದನ್ನು ತಿಳಿದ ಭಾರತಿ ವಿಷ್ಣುವರ್ಧನ್ ಅವರು 2 ಕ್ಯಾರಿಯರ್‍ನಲ್ಲಿ ತಮ್ಮ ಮನೆಯಿಂದ ಊಟ ಪಾರ್ಸಲ್ ಕಳುಹಿಸಿದ್ದಾರೆ.
Advertisement
ಕಳೆದ ಕೆಲವು ದಿನಗಳಿಂದ ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದರು. ಮಂಡ್ಯ ಬಸ್ ದುರಂತ ಘಟನೆಯ ಬಳಿಕ ಸುಸ್ತಾಗಿದ್ದ ಅಂಬರೀಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂಬರೀಶ್ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv