ಕರುನಾಡಿನ ಎಲ್ಲರ ನೆಚ್ಚಿನ ವಾಹಿನಿ ಜೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಸರಿಗಮಪ, ವೀಕೆಂಡ್ ವಿತ್ ರಮೇಶ್, ಡ್ರಾಮಾ ಜೂನಿಯರ್ಸ್ ಮತ್ತು ಕಾಮಿಡಿ ಕಿಲಾಡಿಗಳು ಸೇರಿ ಹಲವಾರು ಶೋಗಳ ಮೂಲಕ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಈ ಪಟ್ಟಿಗೆ ಭರ್ಜರಿ ಬ್ಯಾಚುಲರ್ಸ್ (Bharjari Bachelors) ಸೀಸನ್ 2 ಸೇರ್ಪಡೆಯಾಗಿದ್ದು, ಇದು ಜೀವನದ ಪ್ರಮುಖ ಮೈಲಿಗಲ್ಲುಗಳಲ್ಲಿ ಒಂದಾದ ಮದುವೆಗೆ ತಯಾರಿ ನಡೆಸುತ್ತಿರುವ ಯುವ ಬ್ಯಾಚುಲರ್ಗಳ ಜೀವನ ಮತ್ತು ವ್ಯಕ್ತಿತ್ವಗಳ ಮೇಲೆ ಕೇಂದ್ರೀಕರಿಸುವ ರಿಯಾಲಿಟಿ ಶೋ ಆಗಿದೆ.
ಭರ್ಜರಿ ಬ್ಯಾಚುಲರ್ಸ್ ಮೊದಲ ಸೀಸನ್ ಯಶಸ್ಸಿನ ಬಳಿಕ ಎರಡನೇ ಸೀಸನ್ ಕೂಡ ಕರ್ನಾಟಕದಾದ್ಯಂತ ಪ್ರೇಕ್ಷಕರ ಹೃದಯ ಗೆದ್ದಿದೆ. ಈ ಸೀಸನ್‌ನಲ್ಲಿ ಹೊಸ ಬ್ಯಾಚುಲರ್‌ಗಳನ್ನು ಪರಿಚಯಿಸಲಾಯಿತು. ಅವರು ತಮ್ಮ ಆತ್ಮವಿಶ್ವಾಸ, ಸಂವಹನ ಕೌಶಲ್ಯ, ಸ್ವಾಭಾವಿಕತೆ ಮತ್ತು ಒಟ್ಟಾರೆ ವ್ಯಕ್ತಿತ್ವವನ್ನು ಪರೀಕ್ಷಿಸಲು ಮಾಡಲಾಗಿದ್ದ ಅನೇಕ ಸುತ್ತುಗಳಲ್ಲಿ ಭಾಗವಹಿಸಿ ಎಲ್ಲರ ಮನಗೆದ್ದಿದ್ದಾರೆ.
ಸೀಸನ್ ನಲ್ಲಿ ಬ್ರಹ್ಮಚಾರಿ vs ಸಂಸಾರಿ, ಡೆಡಿಕೇಶನ್ ರೌಂಡ್, ಕಂಪ್ಯಾಟಿಬಿಲಿಟಿ ರೌಂಡ್, ಪ್ರೊಪೋಸ್ ರೌಂಡ್, ಸೀನಿಯರ್ಸ್ vs ಜೂನಿಯರ್ಸ್ ಹೀಗೆ ವಿಭಿನ್ನ ಸುತ್ತುಗಳು ಇದ್ದು ಇದರಲ್ಲಿ ಏಂಜೆಲ್ಸ್ ಮತ್ತು ಬ್ಯಾಚುಲರ್ಸ್ ಸಕ್ಕತಾಗಿ ಭಾಗವಹಿಸಿ ಎಲ್ಲರನ್ನೂ ಮನರಂಜಿಸಿದ್ದಾರೆ. ಅಷ್ಟೇ ಅಲ್ಲದೇ ಈ ಶೋ ಭಾವನಾತ್ಮಕವಾಗಿ ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಅದ್ಬುತ ನಿರೂಪಣೆಯ ಮೂಲಕ ನಿರಂಜನ್ ದೇಶಪಾಂಡೆ (Niranjan Deshpande) ಈ ಶೋನ ನಡೆಸಿಕೊಟ್ಟಿದ್ದು, ಜಡ್ಜ್‌ಗಳಾದ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಈ ಶೋನ ಮತ್ತೊಂದು ಕೇಂದ್ರ ಬಿಂದುವಾಗಿದ್ದರು. ಹಾಗೆಯೇ ಶೋನಲ್ಲಿ ಭಾಗವಹಿಸಿದ ಬ್ಯಾಚುಲರ್ಸ್ ಹಾಗೂ ಏಂಜೆಲ್ಸ್ ಗಳು ತಮ್ಮದೇ ಆದ ಶೈಲಿಯಲ್ಲಿ ವೀಕ್ಷಕರನ್ನು ಮನರಂಜಿಸಿದ್ದಾರೆ. ಇದನ್ನೂ ಓದಿ: ದರ್ಶನ್-ಪವಿತ್ರಾ ಲಿವ್ ಇನ್ ರಿಲೇಷನ್ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
ಅಂತಿಮ ಸುತ್ತಿನಲ್ಲಿ ಸುನೀಲ್-ಅಮೃತಾ, ದರ್ಶನ್-ಅಪೇಕ್ಷಾ, ರಕ್ಷಕ್ ಬುಲೆಟ್- ರಮೋಲ, ಹುಲಿ ಕಾರ್ತಿಕ್- ಧನ್ಯ, ಗಾಬ್ರಿ -ಅನನ್ಯಾ, ಉಲ್ಲಾಸ್-ಪವಿ, ಪ್ರವೀಣ್ ಜೈನ್- ಸುಕೃತಾ, ಪ್ರೇಮ್ ಥಾಪಾ-ವಿಜಯಲಕ್ಷ್ಮಿ, ಡ್ರೋನ್ ಪ್ರತಾಪ್-ಗಗನಾ, ಮತ್ತು ಸೂರ್ಯಾ- ಅಭಿಜ್ಞಾ ಭಾಗವಹಿಸಲಿದ್ದಾರೆ. ಹಾಗೆಯೇ ಭರ್ಜರಿ ಬ್ಯಾಚುಲರ್ ಸೀಸನ್ 2 ನ ವಿಜೇತರು ಯಾರಾಗುತ್ತಾರೆ ಅನ್ನುವುದಕ್ಕೆ ಈ ವಾರಾಂತ್ಯದಲ್ಲಿ ಸಿಗಲಿದೆ ಉತ್ತರ.
ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ನ ವಿಜೇತರು ಯಾರಾಗ್ತಾರೆ? ತಿಳ್ಕೊಳೋಕೆ ಮಿಸ್ ಮಾಡದೇ ನೋಡಿ ಜೀ಼ ಕನ್ನಡ ಇದೇ ಭಾನುವಾರ ಸಂಜೆ 6 ಗಂಟೆಗೆ.