ಕಿರುತೆರೆಯ ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದರು. ಏಪ್ರಿಲ್‌ನಲ್ಲಿ ಗಂಡು ಮಗುವಿಗೆ ತಾಯಿಯಾದ ನಟಿ ಭಾರತಿ ಸಿಂಗ್ ಮತ್ತು ಹರ್ಷ್ ಲಿಂಬಾಚಿಯಾ ದಂಪತಿ ಈಗ ಸಾಮಾಜಿಕ ಜಾಲತಾಣದ ಮೂಲಕ ಮುದ್ದು ಮಗನನ್ನು ಪರಚಯಿಸಿದ್ದಾರೆ.
ಖಾಸಗಿ ಶೋವೊಂದರಲ್ಲಿ ಭಾರತಿ ಮತ್ತು ಹರ್ಷ್ ಪರಿಚಯವಾಗಿ ನಂತರ ಪ್ರೀತಿಯಲ್ಲಿದ್ದ ಈ ಜೋಡಿ 7 ವರ್ಷಗಳ ಡೇಟಿಂಗ್ ನಂತರ 2017ರಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಈಗ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಏಪ್ರಿಲ್‌ನಲ್ಲಿ ಭಾರತಿ ಸಿಂಗ್ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈಗ ಚೆಂದದ ಫೋಟೋಶೂಟ್ ಮೂಲಕ ಮಗನನ್ನು ಈ ಜೋಡಿ ಪರಿಚಯಿಸಿದ್ದಾರೆ. ಇದನ್ನೂ ಓದಿ:ಕೆ.ಎಲ್ ರಾಹುಲ್ ಜೊತೆ ಮದುವೆಯ ವದಂತಿಗೆ ಸ್ಪಷ್ಟನೆ ನೀಡಿದ ಅಥಿಯಾ ಶೆಟ್ಟಿ
View this post on Instagram
ಅಂದಹಾಗೆ ಭಾರತಿ ಸಿಂಗ್ ದಂಪತಿಯ ಮುದ್ದಾದ ಮಗುವಿಗೆ ಲಕ್ಷ್ ಎಂದು ನಾಮಕರಣ ಮಾಡಿದ್ದಾರೆ. ಸದ್ಯ ಮಗ ಲಕ್ಷ್ ಫೋಟೋಗೆ ಅಭಿಮಾನಿಗಳು ಮತ್ತು ಸಿನಿರಂಗದ ಸ್ನೇಹಿತರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ಈ ಫೋಟೋಗಳ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
Live Tv
[brid partner=56869869 player=32851 video=960834 autoplay=true]