– ಮೃತರ ಸಂಖ್ಯೆ 9 ಕ್ಕೆ ಏರಿಕೆ
ಕಾರವಾರ: ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಎಸ್ಪಿ ದೀಪನ್ ಮಾತನಾಡಿ, ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯುವಾಗ ಅವಘಡ ಸಂಭವಿಸಿದೆ. ಘಟನೆಯಲ್ಲಿ 2-3 ಗ್ರಾಮದವರು ಇದ್ದಾರೆ. ಒಟ್ಟು 13 ಜನರು ನೀರಿಗೆ ಇಳಿದಿದ್ದರು. 8 ಜನರ ಮೃತ ದೇಹಗಳು ಆಸ್ಪತ್ರೆಯಲ್ಲಿವೆ. ಲಲಿತಾ ಜಗದೀಶ್ ಆಸ್ಪತ್ರೆಯಲ್ಲಿದ್ದಾರೆ. ಮಹಾದೇವಿ, ನಾಗರತ್ನ ಅವರನ್ನ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದರಲ್ಲಿ ಬೇರೆ-ಬೇರೆ ಕುಟುಂಬದವರು ಇದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಟ್ಕಳ ನದಿಯಲ್ಲಿ 8 ಮಂದಿ ಜಲಸಮಾಧಿ – ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಇನ್ನೂ ಎಸಿ ಮಹೇಶ್ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಘಟನೆಯಲ್ಲಿ 8 ಜನರು ಮೃತಪಟ್ಟಿದ್ದಾರೆ. ಅವರ ಮೃತದೇಹ ಸಹ ಪತ್ತೆಯಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನ ಉಡುಪಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವೆಂಕಟಾಪುರ ನದಿಯಲ್ಲಿ ಕಪ್ಪೆ ಚಿಪ್ಪು ತರಲು ಹೋಗಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಬಂದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
