ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ವಿರುದ್ಧ ಮಹಿಳೆ ಅಪಹರಣ ಪ್ರಕರಣದಲ್ಲಿ ಈಗ ಎಸ್‍ಐಟಿ (SIT) ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ಒಂದೆಡೆ ಭವಾನಿ ರೇವಣ್ಣಗೆ (Bhavani Revanna) ನೋಟಿಸ್ ಕೊಟ್ಟರೂ ವಿಚಾರಣೆಗೆ ಬಂದಿಲ್ಲ. ಇನ್ನೊಂದೆಡೆ ಭವಾನಿ ಕಾರು ಚಾಲಕ ಕೂಡ ನಾಪತ್ತೆಯಾಗಿದ್ದಾರೆ.
Advertisement
ನೋಟಿಸ್ ಕೊಟ್ರೂ ನೋ ಯೂಸ್: ಪ್ರಕರಣದಲ್ಲಿ ಭವಾನಿ ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳೋದಕ್ಕಾಗಿ ಎಸ್‍ಐಟಿ ವಿಚಾರಣೆಗೆ ಕರೆದಿದೆ. ಈಗಾಗಲೇ 2 ನೋಟಿಸ್ ನೀಡಿದರು ಕೂಡ ಭವಾನಿ ರೇವಣ್ಣ ವಿಚಾರಣೆಗೆ ಬರೋದಿರಲ್ಲಿ ಎಸ್ ಐಟಿಯ ಸಂಪರ್ಕಕ್ಕೂ ಸಿಕ್ಕಿಲ್ಲ. ಅನಾರೋಗ್ಯದ ನೆಪದಿಂದ ಇದೂವರೆಗೂ ವಿಚಾರಣೆಗೆ ಹಾಜರಾಗಿಯೇ ಇಲ್ಲ. ಆದರೆ ಭವಾನಿ ಎಲ್ಲಿದ್ದಾರೆ…? ಭವಾನಿ ಯಾವಾಗ ವಿಚಾರಣೆಗೆ ಬರ್ತಾರೆ ಅಂತ ಕಾದುಕುಳಿತುಕೊಳ್ಳುವ ರೀತಿ ಆಗಿದೆ. ಇದನ್ನೂ ಓದಿ: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಸಿಎಂ 2ನೇ ಪತ್ರ- ಪ್ರಧಾನಿಗೆ ಬರೆದ ಲೆಟರ್‌ನಲ್ಲಿ ಏನಿದೆ?
Advertisement
Advertisement
ಭವಾನಿ ಡ್ರೈವರ್ ನಾಪತ್ತೆ: ಇತ್ತ ಭವಾನಿ ರೇವಣ್ಣ ಡ್ರೈವರ್ ನಾಪತ್ತೆಯಾಗಿದ್ದಾನೆ. ಭವಾನಿ ರೇವಣ್ಣ ಡ್ರೈವರ್ ಅಜಿತ್ (Driver Ajit) ನಾಪತ್ತೆಯಾಗಿದ್ದು, ಎಸ್‍ಐಟಿ ಮೂರು ನೋಟಿಸ್ ಕೊಟ್ಟರು ಕೂಡ ವಿಚಾರಣೆಗೆ ಬಂದಿಲ್ಲ. ಇದೀಗ ಎಸ್‍ಐಟಿ ಪೊಲೀಸರು ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದಾರೆ. ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಅನ್ನೋ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿದ್ದು ಇದೇ ಅಜಿತ್ ಅನ್ನೋ ಮಾಹಿತಿ ಇದೆ. ಹೀಗಾಗಿಯೇ ಅಜಿತ್ ನನ್ನು ಎಸ್‍ಐಟಿಯವರು ಹುಡುಕಾಟ ನಡೆಸಿದ್ದಾರೆ.