ಹಾಸನ: ಹೊಳೆನರಸೀಪುರದ (Holenarasipur) ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ (Bhavani Revanna) ಅವರು ಪೂಜೆ ವೇಳೆ ಕಣ್ಣೀರಿಟ್ಟಿದ್ದಾರೆ.
ಎರಡನೇ ಶ್ರಾವಣ ಶನಿವಾರದ ಹಿನ್ನೆಲೆ ರಂಗನಾಥಸ್ವಾಮಿ ದೇವಾಲಯಕ್ಕೆ ಭವಾನಿ ರೇವಣ್ಣ ಅವರು ಕುಟುಂಬಸ್ಥರ ಜೊತೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬದ ಸದಸ್ಯರ ಜೊತೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿದರು. ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ನೆರವೇರಿಸಿದರು. ಪೂಜೆ ವೇಳೆ ಅವರು ಕಣ್ಣೀರಿಟ್ಟರು. ಇದನ್ನೂ ಓದಿ: ಚೆನ್ನಮ್ಮ ಅವ್ರು ಕೊನೆಯ ದಿನಗಳಲ್ಲಿ ಪ್ರಜ್ವಲ್ ರೇವಣ್ಣರನ್ನ ನೋಡಬೇಕೆಂಬ ಆಸೆ ಇಟ್ಟುಕೊಂಡಿದ್ರು: ಕುಮಾರಸ್ವಾಮಿ
ಜೈಲಲ್ಲಿರುವ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ನೆನೆದು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಅವರು ಕಂಬನಿ ಒರೆಸಿಕೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪೂಜೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಸೂರಜ್ ರೇವಣ್ಣ ಭಾಗಿಯಾಗಿದ್ದರು. ಇದನ್ನೂ ಓದಿ: ತಂದೆ, ತಾಯಿ ಮೊಬೈಲ್ ನಂಬರ್‌ಗೆ ಶಿವ, ಪಾರ್ವತಿ ಹೆಸರಿಟ್ಟಿದ್ದ ಪ್ರಜ್ವಲ್

