ಹಾಸನ: ಕೆ.ಆರ್.ನಗರ (K R Nagar) ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ (Bhavani Revanna) 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ.
ಹಾಸನಕ್ಕೆ (Hassan) ಬರುತ್ತಿದ್ದಂತೆ ಜಿಲ್ಲೆಯ ಗಡಿಭಾಗ ಹಿರಿಸಾವೆ, ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಭವಾನಿ ರೇವಣ್ಣ ಅವರನ್ನು ಸ್ವಾಗತಿಸಿದ್ದಾರೆ. ಹೂಮಳೆ ಸುರಿಸಿ, ಆರತಿ ಬೆಳಗಿ ಬರಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಿ, ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.
ಮೂರು ದಿನಗಳ ಹಿಂದೆಯಷ್ಟೇ ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಸಿಸಲು ಭವಾನಿ ರೇವಣ್ಣಗೆ ಹೈಕೋರ್ಟ್ ರಿಲೀಫ್ ನೀಡಿತ್ತು. ಇದನ್ನೂ ಓದಿ: ಭವಾನಿ ರೇವಣ್ಣಗೆ ʻಹೈʼ ರಿಲೀಫ್ – ಮೈಸೂರು, ಹಾಸನ ಪ್ರವೇಶಿಸಲು ಕೋರ್ಟ್ ಅಸ್ತು
ಈ ಹಿಂದೆ ಭವಾನಿ ರೇವಣ್ಣ ಅವರು ಮೈಸೂರು (Mysuru) ಮತ್ತು ಹಾಸನ (Hassan) ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಹೈಕೋರ್ಟ್(HighCourt) ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಸುತ್ತಳತೆಯಲ್ಲಿ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಹೊಸ ಷರತ್ತು ವಿಧಿಸಿದೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಈಗ ಬೇಕಿದೆ ಹನುಮನ ಶ್ರೀರಕ್ಷೆ – ನಿತ್ಯ ಹನುಮಾನ್ ಚಾಲಿಸ ಪಠಿಸುತ್ತಿರೋ ಪ್ರಜ್ವಲ್ ರೇವಣ್ಣ
ಏನು ಪ್ರಕರಣ?
ತನ್ನ ತಾಯಿ ಕಣ್ಮರೆಯಾಗಿದ್ದಾರೆಂದು ಸಂತ್ರಸ್ತೆ ಪುತ್ರ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ನಡೆಸಿದ್ದ ಪೊಲೀಸರು, ಹೆಚ್.ಡಿ.ರೇವಣ್ಣ (H D Revanna) ಅವರಿಗೆ ಸಂಬಂಧಿಸಿದ್ದೆಂದು ಹೇಳಲಾದ ತೋಟದ ಮನೆಯೊಂದರಿಂದ ಆಕೆಯನ್ನು ರಕ್ಷಿಸಿದ್ದರು. ಅಪಹರಣಕ್ಕೆ ಭವಾನಿ ರೇವಣ್ಣ ಅವರ ಕಾರು ಬಳಕೆಯಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಭವಾನಿ ರೇವಣ್ಣ ಹಾಗೂ ಅವರ ಕಾರು ಚಾಲಕ ಅಜಿತ್ ವಿರುದ್ಧವೂ ದೂರು ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿತ್ತು. ಆದ್ರೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿತ್ತು. ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿ ವಜಾ – ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣ