– ಹಿಂದಿನ ಡಿಸಿ ಏನ್ ಕಡಿದು ದಬಾಕಿರೋದು?
– ಎರಡು ತಿಂಗಳಿಗೊಮ್ಮೆ ಸಭೆ ನಡೆಸಿದ್ದರಿಂದ ಫಲಿತಾಂಶ
ಹಾಸನ: ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, ರಿಸಲ್ಟ್ ನಲ್ಲಿ ಉತ್ತಮ ಅಂಕಗಳು ಬರುವಲ್ಲಿ ನನ್ನ ಪತ್ನಿ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಎಸ್‍ಎಸ್ ಎಲ್‍ಸಿ ಫಲಿತಾಂಶದಲ್ಲಿ ಉತ್ತಮ ಸ್ಥಿತಿಗೆ ಸರ್ಕಾರದ ನೀತಿಗಳು ಕಾರಣವಾಗಿದೆ. ಹಾಗೆಯೇ ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement
ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಪ್ರಯತ್ನ ಕೂಡ ಇದೆ. ನೂರು ಫಲಿತಾಂಶ ಬಂದ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಸನ್ಮಾನ ಮಾಡುತ್ತೇವೆ. ಈ ಫಲಿತಾಂಶದ ಹಿನ್ನೆಲೆಯಲ್ಲಿ ಶಾಲೆಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ವಿಜಯ ಭಾಸ್ಕರ್ ಪ್ರಯತ್ನ ಕೈಗೂಡಿದೆ. ಅವರ ಕಾರ್ಯಸೂಚಿ ಪ್ರಯತ್ನ ಸಫಲವಾಗಿದೆ ಎಂದು ಅವರು ಹೇಳಿದರು.
Advertisement
Advertisement
ಜಿಲ್ಲೆಯ ಉತ್ತಮ ಫಲಿತಾಂಶದಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ಪ್ರಯತ್ನ ಉತ್ತಮವಾಗಿದೆ. ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ನಂ.1 ಸ್ಥಾನ ಬಂದಿದೆ. ಇದಕ್ಕೆ ಮೊದಲು ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: SSLCಯಲ್ಲಿ ಹಾಸನ ಜಿಲ್ಲೆ ಫಸ್ಟ್ ಬಂದ ಕಥೆ ಬಿಚ್ಚಿಟ್ಟ ರೋಹಿಣಿ ಸಿಂಧೂರಿ!
Advertisement
ಪ್ರತಿ ಹಂತದಲ್ಲೂ ಸಭೆ ನಡೆಸಿ 2006ರಿಂದ ಕುಮಾರಸ್ವಾಮಿ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿದೆ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಅವರು ಎರಡು ತಿಂಗಳಿಗೊಮ್ಮೆ ಸಭೆ ನಡೆಸುತ್ತಿದ್ದರು. ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿ ಎಂದು ಬಿಇಓಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಕುಮಾರಸ್ವಾಮಿ 1,600 ಕೋಟಿ ಅನುದಾನ ನೀಡಿದ್ದರು ಅಂದರು.
ಜಿಲ್ಲೆಯ ಎಲ್ಲಾ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಗೌರವ ಸಲ್ಲಿಸುತ್ತೇನೆ. 140 ಪ್ರೌಢಶಾಲೆಗಳಲ್ಲಿ 86 ಶಾಲೆಗಳಲ್ಲಿ ಶೇ.100 ಫಲಿತಾಂಶ ಬಂದಿದೆ. ಇದಕ್ಕೆ ಕಾರಣರಾದ ಶಾಲೆಯ ಶಿಕ್ಷಕರು, ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಶೇ.100 ಫಲಿತಾಂಶ ಬಂದಿರುವ ಶಾಲೆಗಳ ಶಿಕ್ಷಕರಿಗೆ ಸನ್ಮಾನ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ರೋಹಿಣಿ ಸಿಂಧೂರಿಗೆ ಟಾಂಗ್:
ಹಿಂದಿನ ಡಿಸಿ ಏನು ಕಡಿದು ದಬಾಕಿರೋದು. ಶಿಕ್ಷಕರಿಗೆ ಪರೀಕ್ಷೆ ಮಾಡಲು ಹೋಗಿ ಅವರೇ ಉಗಿದು ಕಳುಹಿಸಿದ್ದರು. ಅವರು ಏನೂ ಮಾಡಿಲ್ಲ. ಶಿಕ್ಷಕರಿಗೆ ಪರಿಕ್ಷೆ ಮಾಡಲು ಹೋಗಿ ಅಸೆಂಬ್ಲಿಯಲ್ಲಿ ಚರ್ಚೆಯಾಗಿದೆ. ಅವರು ಶಿಕ್ಷಕರ ಪರೀಕ್ಷೆ ಮಾಡದೇ ಈಗ ಉತ್ತಮ ಫಲಿತಾಂಶ ಬಂದಿದೆಯಲ್ಲ. ಅವರು ಜಿಲ್ಲೆಗೆ ಬಂದಿದ್ದಾರೋ ಇಲ್ಲವಾ ಎಂದು ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರ್ಕಾರದ ಯೋಜನೆಗಳಿಂದ ಕಾಲೇಜುಗಳಿಲ್ಲದ ಕಡೆ ಕಾಲೇಜು ಉದ್ಘಾಟಿಸಲಾಗಿದೆ ಅಂದರು.
ನನ್ನ ಪತ್ನಿ ಪ್ರಯತ್ನ ಸಫಲವಾಗಿದೆ. ಆದ್ರೆ ನಾನು ಇದನ್ನು ಹೇಳಿಕೊಳ್ಳಲು ಹೋಗಿದ್ದೇನಾ ಎಂದು ಪ್ರಶ್ನಿಸುವ ಮೂಲಕ ರೋಹಿಣಿ ಸಿಂಧೂರಿಗೆ ಟಾಂಗ್ ಕೊಟ್ಟ ಅವರು, ಜಿಲ್ಲೆಯಲ್ಲಿ ಉತ್ತಮ ಶಿಕ್ಷಣಕ್ಕೆ ಮಾಜಿ ಸಚಿವ ಬಸವರಾಜ್ ಹೊರಟ್ಟಿ, ನಮ್ಮ ಕುಮಾರಣ್ಣ, ಸರ್ಕಾರದ ಕಾರ್ಯದರ್ಶಿ ವಿಜಯ್ ಭಾಸ್ಕರ್ ರವರ ಕೊಡುಗೆ ಬಹಳಷ್ಟಿದೆ ಎಂದು ಹೇಳಿದರು. ಇದನ್ನೂ ಓದಿ: SSLC ಫಲಿತಾಂಶದಲ್ಲಿ ಹಾಸನ ಫಸ್ಟ್ – ಎಲ್ಲ ರೇವಣ್ಣ ನಿಂಬೆಹಣ್ಣು ಪ್ರಭಾವ ಎಂದು ಟ್ರೋಲ್