ಹಾಸನ: ಸಿಎಂ ಕುಮಾರಸ್ವಾಮಿ ಅವರು ಹಾಸನಕ್ಕೆ ಬಂದ ಹಿನ್ನೆಲೆಯಲ್ಲಿ ಲೋಕೊಪಯೋಗಿ ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸೌಟು ಹಿಡಿದಿದ್ದಾರೆ.
ಕಳೆದ ಮೂರು ದಿನಗಳಿಂದ ಹಾಸನದಲ್ಲಿ ಕೃಷಿ ಮೇಳ, ಉದ್ಯೋಗ ಮೇಳ ನಡೆಯುತ್ತಿದೆ. ಮೂರು ದಿನಗಳ ಕಾಲ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಇಂದು ಕೊನೆಯ ದಿನದಂದು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಲಮನ್ನಾ ಋಣ ಪತ್ರ ವಿತರಣಾ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಈ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಆಗಮಿಸಿದ್ದಾರೆ. ಹಳೇಕೋಟೆ ಜಿಲ್ಲಾ ಪಂಚಾಯ್ತಿ ಸದಸ್ಯೆ ಹಾಗೂ ಆರೋಗ್ಯ ಥಾಯಿ ಸಮಿತಿ ಅಧ್ಯಕ್ಷರಾಗಿರುವ ಭವಾನಿ ರೇವಣ್ಣ ಇಂದು ಪತಿ ರೇವಣ್ಣ ಅವರ ಜೊತೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಅಲ್ಲದೇ ಕಾರ್ಯಕ್ರಮಕ್ಕೆ ಬಂದವರಿಗೆ ಸ್ವತಃ ತಾವೇ ಊಟ ಬಡಿಸಿದ್ದಾರೆ.
ಭವಾನಿ ರೇವಣ್ಣ ಇಂದು ಅಡುಗೆ ಬಡಿಸುತ್ತಿದವರನ್ನು ಪಕ್ಕಕ್ಕೆ ಕಳುಹಿಸಿ ತಾವೇ ಊಟ ಬಡಿಸಿದ್ದಾರೆ. ಭವಾನಿ ಅವರು ಅಡುಗೆ ಬಡಿಸುತ್ತಿರುವುದನ್ನು ಕಾರ್ಯಕ್ರಮಕ್ಕೆ ಬಂದಿದ್ದ ಸರ್ವಾಜನಿಕರಿಗೆ ನೋಡಿ ಆಶ್ಚರ್ಯಪಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv