ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಮತ ಎಣಿಕೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಆರಂಭವಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.
Advertisement
ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿ ಸೋತಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ದಕ್ಷಿಣ ಕೊಲ್ಕತ್ತಾದ ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ತಿಬ್ರೇವಾಲ್ ಮತ್ತು ಸಿಪಿಐ(ಎಂ)ನ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಸ್ಪರ್ಧಿಸಿದ್ದಾರೆ. ಇದನ್ನೂ ಓದಿ: ತುಕುಡೆ ಗ್ಯಾಂಗಿನ ನಾಯಕರ ಸಮಾಧಿ ಮೇಲೆ ಬಿಜೆಪಿ, ಸಂಘ ಬಲವಾಗಿ ಬೆಳೆದಿದೆ: ಸಿ.ಟಿ.ರವಿ
Advertisement
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರು. ಆದರೆ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಆರು ತಿಂಗಳೊಳಗೆ ಚುನಾಯಿತರಾಗಬೇಕು. ಹೀಗಾಗಿ ಮಮತಾ ಬ್ಯಾನರ್ಜಿ ಅವರು ಕೊಲ್ಕತ್ತಾದ ಭವಾನಿಪುರದಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
Advertisement
Advertisement